

ಬೆಂಗಳೂರು: ಗ್ರಾಮೀಣ ಪತ್ರಕರ್ತರ ಬಹು ವರ್ಷಗಳ ಬೇಡಿಕೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ (Government) ಅಸ್ತು ಎಂದಿದ್ದು, ಚಿತ ಬಸ್ ಬಾಸ್ ಸೌಲಭ್ಯಕ್ಕೆ ರಾಜ್ಯ ಸರ್ಕಾರ ಅನುಮೋದನೆ ನೀಡಿದೆ.
ಈ ಸಂಬಂಧ ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ವಾರ್ತಾ ಇಲಾಖೆಯ ಅಧೀನ ಕಾರ್ಯದರ್ಶಿ ಆದೇಶವನ್ನು ಹೊರಡಿಸಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೊಟ್ಟ ಭರವಸೆಯನ್ನು ಈಡೇರಿಸಿ ನುಡಿದಂತೆ ನಡೆದಿದ್ದಾರೆ.