

ಹಾವೇರಿ: ಮಕ್ಕಳ ಹಾಗೂ ತಾಯಂದಿರಲ್ಲಿ ಕಂಡುಬರುವ ಅಪೌಷ್ಟಿಕತೆ ತೊಡೆದುಹಾಕಲು ಸರ್ಕಾರ ಅನೇಕ ಯೋಜನೆಗಳನ್ನು ಜಾರಿಗೆ ತಂದಿದೆ. ಈ ಯೋಜನೆಗಳು ಎಲ್ಲರಿಗೂ ತಲುಪಬೇಕು. ಈ ನಿಟ್ಟಿನಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದು ಹಿರಿಯ ದಿವಾಣಿ ನ್ಯಾಯಾ-ಶ ಬಾಲಮುಕುಂದ ರಮೇಶರಾವ ಮುತಾಲಿಕದೇಸಾಯಿ ಹೇಳಿದರು.
ನಗರದ ಇಜಾರಿಲಕಮಾಪೂರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಸೋಮವಾರ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿ-ಕಾರ, ವಕೀಲರ ಸಂ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ವತಿಯಿಂದ ಏರ್ಪಡಿಸಿದ್ದ ರಾಷ್ಟ್ರೀಯ ಪೌಷ್ಟಿಕ ದಿನಾಚರಣೆ ಹಾಗೂ ಪೋಷಣ್ ಅಭಿಯಾನ ಮಾಸಾಚರಣೆ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.
ಜಿಲ್ಲೆಯನ್ನು ಅಪೌಷ್ಟಿಕ ಮುಕ್ತ ಜಿಲ್ಲೆಯನ್ನಾಗಿ ಮಾಡಲು ಸಂಕಲ್ಪಮಾಡೋಣ. ಮಕ್ಕಳಿಗೆ ಮೊಳಕೆಕಾಳು, ಸಿರಿಧಾನ್ಯಗಳ ಆಹಾರ ಹಾಗೂ ಹಣ್ಣು&ತರಕಾರಿಗಳನ್ನು ಹೆಚ್ಚಾಗಿ ನೀಡಬೇಕು. ಮಕ್ಕಳು ಸದೃಢವಾಗಿ ಬೆಳೆದರೆ ಸದೃಢ ದೇಶಕಟ್ಟಲು ಸಾಧ್ಯ. ಕ್ರೀಡೆ ಸೇರಿದಂತೆ ಬೇರೆ ಬೇರೆ ೇತ್ರಗಳಲ್ಲಿ ಸಾಧನೆ ಮಾಡಲು ಮಕ್ಕಳು ಬಾಲ್ಯದಲ್ಲೇ ಉತ್ತಮ ಆರೋಗ್ಯ ಹೊಂದಬೇಕು ಎಂದರು.
ವಕೀಲರ ಸಂದ ಜಿಲ್ಲಾಧ್ಯ ಎಸ್.ಎಚ್. ಜತ್ತಿ ಮಾತನಾಡಿ, ಉತ್ತಮ ಆಹಾರದಿಂದ ಉತ್ತಮ ಆರೋಗ್ಯ ಹೊಂದಲು ಸಾಧ್ಯ. ಮಕ್ಕಳಿಗೆ ನಮ್ಮ ಸಾಂಪ್ರದಾಯಿಕ ಆಹಾರ ನೀಡುವುದರಿಂದ ಅಪೌಷ್ಠಿಕತೆ ತೊಡೆದುಹಾಕಬಹುದು ಎಂದರು.
ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕ ಶ್ರೀನಿವಾಸ ಆಲದತಿರ್ ಅಧ್ಯತೆ ವಹಿಸಿದ್ದರು. ಸಹಾಯಕ ಕಾನೂನು ನೆರವು ಅಭಿರಣಾ ವಕೀಲ ಎನ್.ಎನ್. ಡಿಳ್ಳೆಪ್ಪನವರ ಪೌಷ್ಟಿಕ ಆಹಾರ ಕಾಯ್ದೆ ಕುರಿತು ಉಪನ್ಯಾಸ ನೀಡಿದರು.
ಸಮಾಮೊಳಕೆಕಾಳು, ಸಿರಿಧಾನ್ಯ, ಹಣ್ಣು&ತರಕಾರಿ ಹಾಗೂ ಹಾಲಿನ ಪುಡಿಯಿಂದ ತಯಾರಿಸಿದ ಲಾಡು, ಶೇಂಗಾ ಚೆಕ್ಕಿ, ಹೋಳಿಗೆ ಸೇರಿ ವಿವಿಧ ಖಾದ್ಯಗಳ ಪ್ರದರ್ಶನ ನಡೆಯಿತು.
ಜಿಲ್ಲಾ ನಿರೂಪಣಾ-ಕಾರಿ ಶೈಲಾ ಕುರಹಟ್ಟಿ, ಶಿಶು ಅಭಿವೃದ್ಧಿ ಯೋಜನಾ-ಧಿಕಾರಿ ಐ.ಎ. ತಹಸೀಲ್ದಾರ್, ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮುಖ್ಯಶಿಕ್ಷಕಿ ಎಸ್.ಜಿ. ಪಾಟೀಲ, ವಿಜಯಲಕ್ಷಿ$್ಮ ಪಾಟೀಲ ಮತ್ತಿತರರು ಉಪಸ್ಥಿತರಿದ್ದರು.
ಶಿಲ್ಪಾ ಸಿದ್ದಮ್ಮನವರ ಸ್ವಾಗತಿಸಿದರು. ಶ್ರೀದೇವಿ ಬ್ಯಾಡಗಿ ನಿರೂಪಿಸಿ, ವಂದಿಸಿದರು.