ಸರ್ಕಾರಿ ಶಾಲಾ ಶಿಕ್ಷಕರ ವರ್ಗಾವಣೆ: ಈ ಅಂಶದ ಆಧಾರದಲ್ಲಿ ಫಿಕ್ಸ್

Teaching
Published on

ಬೆಂಗಳೂರು: 2024-25ನೇ ಸಾಲಿನ ಶಿಕ್ಷಕರ ಸಾಮಾನ್ಯ ವರ್ಗಾವಣೆಗೆ ಮಾ.28ರವರೆಗೆ ಶಿಕ್ಷಕರು ಸಲ್ಲಿಸಿರುವ ಸೇವಾ ಅಂಕದ ಆಧಾರದಲ್ಲಿಯೇ ವರ್ಗಾವಣೆಗೆ ಅಂತಿಮ ವೇಯ್ಟೇಜ್ ಅಂಕಗಳನ್ನು ನಿಗದಿ ಮಾಡುವುದಾಗಿ ಶಿಕ್ಷಣ ಇಲಾಖೆ ತಿಳಿಸಿದೆ.

ಸಾಮಾನ್ಯ ವರ್ಗಾವಣೆ ಸಂಬಂಧ ಪೂರ್ವಭಾವಿ ಚಟುವಟಿಕೆಗಳನ್ನು ಆರಂಭಿಸಲಾಗಿದೆ. ಶಿಕ್ಷಕರು ವೇಯ್ಟೇಜ್ ಅಂಕಗಳನ್ನು ಇಇಡಿಎಸ್ ತಂತ್ರಾಂಶದಲ್ಲಿ ಸಲ್ಲಿಸಲು ಹಲವು ಬಾರಿ ಅವಕಾಶಗಳನ್ನು ನೀಡಲಾಗಿತ್ತು. ಅದರಂತೆ ಮಾ.29ರವರೆಗೆ ಮತ್ತೊಮ್ಮೆ ಅವಕಾಶವನ್ನು ಕಲ್ಪಿಸಲಾಗಿತ್ತು. ಈಗ ಮತ್ತೊಮ್ಮೆ ಅವಕಾಶವನ್ನು ನೀಡುವುದಿಲ್ಲ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ನಿರ್ದೇಶಕರು

ಸ್ಪಷ್ಟಪಡಿಸಿದ್ದಾರೆ.

ಈಗಾಗಲೇ ಡಿಡಿಪಿಐ ಹಾಗೂ ಬಿಇಒ ಗಳು ಇಲಾಖೆ ವೆಬ್‌ಸೈಟ್‌ನಲ್ಲಿ ಪ್ರಕಟಿಸಿದ್ದಾರೆ. ಕರ್ತವ್ಯದಲ್ಲಿರುವ ಸರ್ಕಾರಿ ಪ್ರಾಥಮಿಕ, ಪ್ರೌಢಶಾಲೆ ಸಹ ಶಿಕ್ಷಕರು ಮತ್ತು ಮುಖ್ಯ ಶಿಕ್ಷಕರ ಅಂತಿಮ ಸೇವಾ ಅಂಕಗಳನ್ನೇ ವರ್ಗಾವಣೆಗೆ ಪರಿಗಣಿಸಲಾಗುವುದು ಎಂದು ತಿಳಿಸುವಂತೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net