ಭವಿಷ್ಯಕ್ಕೆ ಸರ್ಕಾರಿ ಶಾಲೆಗಳು ವರದಾನ

hos (2)
ಹೊಸನಗರ ಪಟ್ಟಣದ ಶಾಸಕರ ಮಾದರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿವಿಧ ಅಭಿವೃದ್ಧಿ ಯೋಜನೆಗಳ ಕುರಿತ ಪೋಸ್ಟರ್ ಅನ್ನು ಶಾಸಕ ಬೇಳೂರು ಗೋಪಾಲಕೃಷ್ಣ ಬಿಡುಗಡೆಗೊಳಿಸಿದರು. ನೇರಲೆ ರಮೇಶ, ರಶ್ಮಿ ಹಾಲೇಶ್, ಹರೀಶ್ ಮತ್ತಿತರರಿದ್ದರು.
Published on

ಹೊಸನಗರ: ಶೈಕ್ಷಣಿಕ ಕ್ಷೇತ್ರದಲ್ಲಿ ಸರ್ಕಾರಿ ಶಾಲೆಗಳು ಉತ್ತಮ ಸಾಧನೆ ಮಾಡುತ್ತಿವೆ. ವಿದ್ಯಾರ್ಥಿಗಳ ಭವಿಷ್ಯಕ್ಕೆ ಸರ್ಕಾರಿ ಶಾಲೆಗಳು ವರದಾನವಾಗಿವೆ ಎಂದು ಶಾಸಕ ಗೋಪಾಲಕೃಷ್ಣ ಬೇಳೂರು ಹೇಳಿದರು.

ಪಟ್ಟಣದ ಶಾಸಕರ ಮಾದರಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಆವರಣದಲ್ಲಿ ಶಾಲೆಯ ವಿವಿಧ ಪೂರಕ ಅಭಿವೃದ್ಧಿ ಯೋಜನೆಗಳ ಪೋಸ್ಟರ್ ಬಿಡುಗಡೆ ಮಾಡಿ ಮಾತನಾಡಿದರು.

ಸರ್ಕಾರಿ ಶಾಲೆಗಳು ವಿವಿಧ ಸವಲತ್ತುಗಳು ವಿತರಿಸುವ ಮೂಲಕ ವಿದ್ಯಾರ್ಥಿಗಳ ಸಮಗ್ರ ಪ್ರಗತಿಗೆ ಪೂರಕವಾಗಿ ಸಹಕರಿಸುತ್ತಿದೆ. ಈ ಕಾರಣಕ್ಕೆ ಪೋಷಕರು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗಳಿಗೆ ದಾಖಲಿಸಬೇಕಾಗಿದೆ. ಸರ್ಕಾರಿ ಶಾಲೆಯಲ್ಲಿ ಪ್ರತಿವರ್ಷವೂ ಮಕ್ಕಳ ಸಂಖ್ಯೆ ಹೆಚ್ಚುತ್ತಿದೆ. ಉತ್ತಮ ಶಿಕ್ಷಕ ವರ್ಗ ಹಾಗು ಶಾಲಾಭಿವೃದ್ಧಿ ಸಮಿತಿ ಸದಸ್ಯರ ಕಾರ್ಯವೈಖರಿ ಶಾಲೆಯ ಸಮಗ್ರ ಅಭಿವೃದ್ಧಿಗೆ ಸಹಕಾರಿಯಾಗಿದೆ ಎಂದರು.

ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷ ರಮೇಶ, ತಹಸೀಲ್ದಾರ್ ರಶ್ಮಿ ಹಾಲೇಶ್, ಮುಖ್ಯ ಶಿಕ್ಷಕ ಹರೀಶ್, ಚಂದ್ರಮೌಳಿ ಗೌಡ, ಮಾಸ್ತಿಕಟ್ಟೆ ಸುಬ್ರಹ್ಮಣ್ಯ, ಚಿದಂಬರ, ಗೌತಮ್‌ಕುಮಾರ್, ನಾಸೀರ್ ಮತ್ತಿತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net