

ವಿಜಯಪುರ: ಸರ್ಕಾರಿ ಶಾಲೆಗಳಲ್ಲಿ ಹೆಣ್ಣು ಮಕ್ಕಳಿಗೆ ಶೌಚಗೃಹ ಇರದಿದ್ದರೆ ಶಿಕ್ಷಣ ಇಲಾಖೆ ಅಧಿಕಾರಿಗಳನ್ನೇ ಅಮಾನತುಗೊಳಿಸಲಾಗುವುದು ಎಂದು ಸಚಿವರೊಬ್ಬರು ಎಚ್ಚರಿಕೆ ನೀಡಿದ್ದಾರೆ.
ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವರಾಗಿರುವ ಎಂ.ಬಿ.ಪಾಟೀಲ್ ಇಂಥದ್ದೊಂದು ಎಚ್ಚರಿಕೆಯನ್ನು ನೀಡಿದ್ದಾರೆ. ಇಂದು ನಡೆದ ಕೆಡಿಪಿ ಸಭೆಯಲ್ಲಿ ಅವರು ಹೆಣ್ಣು ಮಕ್ಕಳ ಶೌಚಗೃಹದ ವಿಚಾರವಾಗಿ ಡಿಡಿಪಿಐ ಮತ್ತು ಡಿಡಿಪಿಯು ಅವರಿಗೆ ಈ ಎಚ್ಚರಿಕೆ ನೀಡಿದರು.
ಸರ್ಕಾರಿ ಹಾಗೂ ಸರ್ಕಾರಿ ಅನುದಾನಿತ ಶಾಲೆಗಳಲ್ಲಿ ಹೆಣ್ಣುಮಕ್ಕಳಿಗೆ ಶೌಚಗೃಹ ಇರಲೇಬೇಕು. ಶೌಚಗೃಹ ವಿದ್ಯಾರ್ಥಿನಿಯರ ಸಂಖ್ಯೆಗೆ ಅನುಗುಣವಾಗಿ ಇರಲೇಬೇಕು. ಇಲ್ಲದಿದ್ದರೆ ನಿಮ್ಮನ್ನು ಸಸ್ಪೆಂಡ್ ಮಾಡುವೆ ಎಂಬುದಾಗಿ ಅವರು ಡಿಡಿಪಿಐ ಉಮೇಶ ಶಿರಹಟ್ಟಿಮಠ, ಡಿಡಿಪಿಯು ಹೊಸಮನಿಗೆ ಎಚ್ಚರಿಕೆ ನೀಡಿದರು.