ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದ ಶಿಕ್ಷಕ!

shoot
Published on

ರಾಂಚಿ: ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯ ಸರ್ಕಾರಿ ಶಾಲೆಯೊಂದರಲ್ಲಿ ಶಿಕ್ಷಕರೊಬ್ಬರು ತಮ್ಮ ಇಬ್ಬರು ಸಹೋದ್ಯೋಗಿಗಳನ್ನು ಗುಂಡಿಕ್ಕಿ ಕೊಂದು, ಬಳಿಕ ತಾನೂ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ರಾಂಚಿಯಿಂದ ಸುಮಾರು 300 ಕಿಮೀ ದೂರದಲ್ಲಿರುವ ಪೊರೈಯಾಹತ್ ಪ್ರದೇಶದ ಉನ್ನತೀಕರಿಸಿದ ಪ್ರೌಢಶಾಲೆಯಲ್ಲಿ ಬೆಳಗ್ಗೆ 11 ಗಂಟೆ ಸುಮಾರಿಗೆ ಶಾಲಾ ಸಮಯದಲ್ಲಿ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳಿದ್ದಾರೆ.

ಗೊಡ್ಡಾ ಪೊಲೀಸ್ ಅಧೀಕ್ಷಕ ನಾಥು ಸಿಂಗ್ ಮೀನಾ ಪಿಟಿಐಗೆ ತಿಳಿಸಿದ್ದಾರೆ. ಒಬ್ಬ ಮಹಿಳೆ ಸೇರಿದಂತೆ ಇಬ್ಬರು ಶಿಕ್ಷಕರ ಶವಗಳು ಶಾಲೆಯ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆದರೆ ಆರೋಪಿ ಶಿಕ್ಷಕ ಕೂಡ ಗಂಭೀರವಾಗಿ ಗಾಯಗೊಂಡಿದ್ದಾರೆ.

ಒಬ್ಬ ಮಹಿಳಾ ಶಿಕ್ಷಕಿ ಸೇರಿದಂತೆ ಇಬ್ಬರು ಶಿಕ್ಷಕರ ಶವಗಳು ಶಾಲೆಯ ಕೊಠಡಿಯಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿರುವುದು ಕಂಡುಬಂದಿದೆ. ಆದರೆ ಆರೋಪಿ ಶಿಕ್ಷಕ ಸಹ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಗೊಡ್ಡಾ ಎಸ್ಪಿ ನಾಥು ಸಿಂಗ್ ಮೀನಾ ಅವರು ಸುದ್ದಿ ಸಂಸ್ಥೆಗೆ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net