ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ದಿನಾಂಕ ಫಿಕ್ಸ್​; ಪ್ರಿಯಾಂಕ ಗಾಂಧಿ ಚಾಲನೆ

Gruha Lakshmi Scheme
Published on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷಬ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಸರ್ಕಾರ ಶುಕ್ರವಾರ ದಿನಾಂಕ ಘೋಷಿಸಲಿದೆ.

ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಬಗ್ಗೆ ತೀರ್ಮಾನಿಸಲಾಗಿದ್ದು, ಕಾಂಗ್ರೆಸ್​ ರಾಷ್ಟ್ರೀಯ ಕಾರ್ಯದರ್ಶಿ ಪ್ರಿಯಾಂಕ ಗಾಂಧಿ ವಾದ್ರಾ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.

ಜುಲೈ 16,17,18 ರಂದು ಪ್ರಿಯಾಂಕ ಗಾಂಧಿ ವಾದ್ರಾ ಮೂಲಕ ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸರ್ಕಾರ ಯೋಜಿಸಿದೆ. ಅವರು ಒಪ್ಪಿದ ದಿನಾಂಕದಂದು ಅರ್ಜಿ ಸಲ್ಲಿಕೆಗೆ ಚಾಲನೆ ನೀಡಲು ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನಿಸಲಾಗಿದೆ.

Gruha Lakshmi Scheme

ಇದಲ್ಲದೆ ಸಚಿವ ಸಂಪುಟ ಸಭೆಯಲ್ಲಿ ಕರ್ನಾಟಕ ಸರ್ಕಾರಿ ವ್ಯಾಜ್ಯಗಳ‌ ನಿರ್ವಹಣೆ, ಬಯಲು ಸೀಮೆ ಅಭಿವೃದ್ಧಿ ಮಂಡಳಿ ತಿದ್ದುಪಡಿ, ಮಲೆನಾಡು ಪ್ರದೇಶ ಅಭಿವೃದ್ಧಿ ಮಂಡಳಿ ತಿದ್ದುಪಡಿ, ಮೈಸೂರು ಲ್ಯಾಂಪ್ಸ್ ವರ್ಕ್ಸ್‌ ಲಿ. ಮೌಲ್ಯಮಾಪನ ವಿಧಾನವನ್ನು ಪರಿಷ್ಕರಿಸಲು ತೀರ್ಮಾನಿಸಲಾಗಿದೆ.

ಕೃಷಿ ಮತ್ತು ತೋಟಗಾರಿಕಾ ಬೆಲೆಗಳ ಸ್ಥಿರೀಕರಣ ಮತ್ತು ಬೆಲೆ ನಿಗದಿ ಮಾಡಲು ಸಚಿವ ಸಂಪುಟ ಉಪಸಮಿತಿ ರಚನೆಗೆ ಅನುಮೋದನೆ. ಆರ್ಟಿಕಲ್ 371ಜೆ ಸಂಬಂಧ ವಿಶೇಷ ಅನುಷ್ಠಾನ ಪ್ತಗತಿಯನ್ನು ಪರಿಶೀಲಿಸಲು ಸಚಿವ ಸಂಪುಟ ಉಪ ಸಮಿತಿ ರಚನೆಗೆ ಅನುಮೋದನೆ ನೀಡಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net