ಗ್ರಾಮೀಣಾಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ

IMG-20250422-WA0024
ಮುರುಂಡಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದ ಎಂ.ಎಸ್.ರೋಹಿತ್ ಅವರನ್ನು ಶಾಸಕ ಕೆ.ಎಂ.ಶಿವಲಿಂಗೇಗೌಡ ಅಭಿನಂದಿಸಿದರು. ಶಿವಯ್ಯ, ಶ್ರೀನಿವಾಸ್, ವೆಂಕಟಮುನಿ, ಜವನಪ್ಪ, ಅಶೋಕ್ ಇತರರಿದ್ದರು.
Published on

ಅರಸೀಕೆರೆ: ಗ್ರಾಮೀಣ ಪ್ರದೇಶದ ಅಭಿವೃದ್ಧಿಗೆ ಸರ್ಕಾರ ಹೆಚ್ಚಿನ ಅನುದಾನ ನೀಡುತ್ತಿದೆ ಎಂದು ಗೃಹಮಂಡಳಿ ಅಧ್ಯಕ್ಷರೂ ಆದ ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ಮುರುಂಡಿ ಗ್ರಾಮ ಪಂಚಾಯಿತಿ ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿದ್ದ ಎಂ.ಎಸ್.ರೋಹಿತ್ ಅವರನ್ನು ನಗರದ ಪ್ರವಾಸಿ ಮಂದಿರದಲ್ಲಿ ಇತ್ತೀಚೆಗೆ ಸನ್ಮಾನಿಸಿ ಮಾತನಾಡಿ, ರಸ್ತೆ, ಕುಡಿಯುವ ನೀರು, ಶಿಕ್ಷಣ, ಆರೋಗ್ಯ ಸೇರಿದಂತೆ ಹಲವು ಬಗೆಯ ಮೂಲ ಸೌಕರ್ಯ ಕಲ್ಪಿಸಲು ಕ್ಷೇತ್ರಕ್ಕೆ ನಿರೀಕ್ಷೆಗೂ ಮೀರಿದ ಅನುದಾನ ತಂದಿದ್ದೇನೆ. ಗ್ರಾಮ ಪಂಚಾಯಿತಿ ಚುನಾಯಿತ ಸದಸ್ಯರು ಕೂಡ ಸಿಸಿ ರಸ್ತೆ, ಚರಂಡಿ, ಶಾಲಾ ಕಟ್ಟಡ ದುರಸ್ತಿ ಒಳಗೊಂಡಂತೆ ಜನಪರ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿದರು.

ಮುರುಂಡಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಎಸ್.ರೋಹಿತ್ ಮಾತನಾಡಿ, ಶಾಸಕರು ಹಾಗೂ ಸದಸ್ಯರ ಸಹಕಾರ ಪಡೆದು ಇನ್ನಷ್ಟು ಅಭಿವೃದ್ಧಿ ಕೆಲಸ ಮಾಡುವ ಸಂಕಲ್ಪ ಮಾಡಿದ್ದೇನೆ. ಯಗಚಿ ನದಿ ಮೂಲದಿಂದ ಗ್ರಾಪಂ ವ್ಯಾಪ್ತಿಯಲ್ಲಿ ಶುದ್ಧ ಕುಡಿಯುವ ನೀರು ಪೂರೈಕೆ ಕಾರ್ಯ ಶೀಘ್ರದಲ್ಲೇ ಮುಕ್ತಾಯವಾಗಲಿದ್ದು ಜನರು ಆತಂಕ ಪಡುವ ಅಗತ್ಯವಿಲ್ಲ ಎಂದರು.

ಎಪಿಎಂಸಿ ಮಾಜಿ ಅಧ್ಯಕ್ಷ ಮುರುಂಡಿ ಶಿವಯ್ಯ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶ್ರೀನಿವಾಸ್, ನಗರಸಭೆ ಸದಸ್ಯ ಎಂ.ಆರ್. ವೆಂಕಟಮುನಿ, ಗ್ಯಾರಂಟಿ ಅನುಷ್ಠಾನ ಸಮಿತಿ ಉಪಾಧ್ಯಕ್ಷ ಜವನಪ್ಪ, ಮುಖಂಡ ಅಶೋಕ್, ಶ್ರೀಧರ್ ಸೇರಿದಂತೆ ಗ್ರಾಪಂ ಸದಸ್ಯರು ಹಾಗೂ ಕಾಂಗ್ರೆಸ್ ಮುಖಂಡರು ಹಾಜರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net