ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯ ಸ್ಥಾಪನೆಗೆ ಸರ್ಕಾರದ ಪ್ರಸ್ತಾಪ

Digital Library
Published on

ನವದೆಹಲಿ: ಗುಣಮಟ್ಟದ ಪುಸ್ತಕಗಳ ಲಭ್ಯತೆಗೆ ಅನುಕೂಲವಾಗುವಂತೆ ರಾಷ್ಟ್ರೀಯ ಡಿಜಿಟಲ್ ಗ್ರಂಥಾಲಯವನ್ನು ಸ್ಥಾಪಿಸಲು ಸರ್ಕಾರ ಪ್ರಸ್ತಾಪಿಸಿದೆ.

2023-24ನೇ ಸಾಲಿನ ಕೇಂದ್ರ ಬಜೆಟ್​ ಮಂಡಿಸಿ ಮಾತನಾಡಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್​, 'ಪಂಚಾಯತ್ ಮತ್ತು ವಾರ್ಡ್ ಮಟ್ಟದಲ್ಲಿ ಭೌತಿಕ ಗ್ರಂಥಾಲಯಗಳನ್ನು ಸ್ಥಾಪಿಸಲು ಮತ್ತು ರಾಷ್ಟ್ರೀಯ ಡಿಜಿಟಲ್ ಲೈಬ್ರರಿ ಪ್ರವೇಶಿಸಲು ಮೂಲಸೌಕರ್ಯವನ್ನು ಒದಗಿಸಲು ರಾಜ್ಯಗಳನ್ನು ಪ್ರೋತ್ಸಾಹಿಸಲಾಗುವುದು' ಎಂದು ಹೇಳಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net