ಮುಡಾ ಸೈಟು ಹಂಚಿಕೆ ಕೇಸ್​: ಸಿಎಂ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ಕೊಟ್ಟ ರಾಜ್ಯಪಾಲರು

ವಿಜಯವಾಣಿ - 2024-08-17T100431.351
Published on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ದೊಡ್ಡ ವಿವಾದವನ್ನೇ ಹುಟ್ಟುಹಾಕಿದ್ದ ಮುಡಾ ನಿವೇಶನದ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಹೊಸ ಅಪ್ಡೇಟ್​ ಹೊರಬಿದ್ದಿದೆ. ಮುಡಾ ಸೈಟು ಹಂಚಿಕೆ ಕೇಸ್​ನಲ್ಲಿ ಸಿಎಂ ವಿರುದ್ಧ ರಾಜ್ಯಪಾಲರು ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿದ್ದಾರೆ. ಇದು ಸಿದ್ದರಾಮಯ್ಯ ಅವರಿಗೆ ಮತ್ತಷ್ಟು ಸಂಕಷ್ಟ ತಂದೊಡ್ಡಿದೆ.

ಕಳೆದ ಒಂದು ತಿಂಗಳಿನಿಂದ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದಲ್ಲಿ ಗೋಲ್ಮಾಲ್ ನಡೆದಿರುವುದು ಬೆಳಕಿಗೆ ಬಂದಿದೆ ಎಂಬ ಆರೋಪಗಳು ಕೇಳಿಬಂದಿತ್ತು. ಸಿಎಂ ಸಿದ್ದರಾಮಯ್ಯ ಅವರ ತವರಿನಲ್ಲಿಯೇ ದೊಡ್ಡ ಅಕ್ರಮ ನಡೆದಿದೆ ಎಂದು ವಿಪಕ್ಷ ನಾಯಕರು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡುವಂತೆ ಒತ್ತಾಯಿಸಿದ್ದರು. ಇದೀಗ ರಾಜ್ಯಪಾಲರು ಮುಖ್ಯಮಂತ್ರಿಗಳ ವಿರುದ್ಧ ಪ್ರಾಸಿಕ್ಯೂಷನ್​ಗೆ ಅನುಮತಿ ನೀಡಿರುವುದು, ಸಿದ್ದರಾಮಯ್ಯ ಅವರಿಗೆ ತಪ್ಪದ ಸಂಕಷ್ಟ ಎನ್ನುವಂತಾಗಿದೆ.

ಮಾಹಿತಿಗಳ ಪ್ರಕಾರ, ಮುಂದಿನ ಕಾನೂನು ಹೋರಾಟದ ಬಗ್ಗೆ ಸಿಎಂ ಮಹತ್ವದ ಚರ್ಚೆ ನಡೆಸಲಿದ್ದು, ತಮ್ಮ ನಿವಾಸದಲ್ಲಿ ಗಂಭೀರ ಸಮಾಲೋಚನೆ ಗೆ ಮುಂದಾಗಿದ್ದಾರೆ. ಭೈರತಿ ಸುರೇಶ್, ದಿನೇಶ್ ಗುಂಡೂರಾವ್, ಪ್ರಿಯಾಂಕ್ ಖರ್ಗೆ ಸಿದ್ದರಾಮಯ್ಯ ಜತೆಗಿನ ಮಾತುಕತೆಗೆ ಹಾಜರಾಗಲಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net