ಸೇನಾ ಮುಖ್ಯಸ್ಥ ಬಿಪಿನ್ ರಾವತ್ ನಿಧನದಿಂದ ರಾಷ್ಟ್ರಕ್ಕೆ ನಷ್ಟವುಂಟಾಗಿದೆ: ರಾಜ್ಯಪಾಲ ಗೆಹ್ಲೋಟ್ ಸಂತಾಪ

asdasdasdfddfgdfg
Published on

ಬೆಂಗಳೂರು: ತಮಿಳುನಾಡಿನ ಕೂನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಭಾರತೀಯ ಸೇನಾಪಡೆಯ ಮುಖ್ಯಸ್ಥ ಬಿಪಿನ್​ ರಾವತ್, ಅವರ ಪತ್ನಿ ಹಾಗೂ ಸೇನಾ ಪಡೆಯ ಸಿಬ್ಬಂದಿ ಮೃತಪಟ್ಟಿರುವುದಕ್ಕೆ ಕರ್ನಾಟಕದ ಘನತೆವೆತ್ತ ರಾಜ್ಯಪಾಲರಾದ ಶ್ರೀ ಥಾವರ್ ಚಂದ್ ಗೆಹ್ಲೋಟ್ ಅವರು ಸಂತಾಪ ಸೂಚಿಸಿದ್ದಾರೆ.

ಈ ವಿಚಾರವಾಗಿ ಟ್ವೀಟ್ ಮಾಡಿರುವ ಅವರು, ತಮಿಳುನಾಡಿನ ಕೊನೂರಿನಲ್ಲಿ ಸಂಭವಿಸಿದ ಹೆಲಿಕಾಪ್ಟರ್ ದುರಂತದಲ್ಲಿ ಸೇನಾ ಮುಖ್ಯಸ್ಥರಾದ ಬಿಪಿನ್ ರಾವತ್, ಅವರ ಪತ್ನಿ ಹಾಗೂ ಸೇನಾ ಪಡೆಯ ಇತರ ಸಿಬ್ಬಂದಿ ಮೃತಪಟ್ಟಿರುವುದು ಆಘಾತದ ಸಂಗತಿಯಾಗಿದ್ದು, ರಾಷ್ಟ್ರಕ್ಕೆ ನಷ್ಟವುಂಟಾಗಿದೆ.

ದೇಶದ ರಕ್ಷಣಾ ವಲಯಕ್ಕೆ ಸಿಡಿಎಸ್ ರಾವತ್ ಅವರ ಕೊಡುಗೆ, ನಿಸ್ವಾರ್ಥ ಸೇವೆ ಸ್ಮರಣೀಯ. ದುರಂತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ದೊರೆಯಲಿ ಅವರ ಕುಟುಂಬಕ್ಕೆ ದುಃಖವನ್ನು ಭರಿಸುವ ಶಕ್ತಿ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ರಾಜ್ಯಪಾಲರು ಟ್ವೀಟ್ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net