ಎಸ್​ಸಿ-ಎಸ್​​ಟಿ ಮೀಸಲಾತಿ ಹೆಚ್ಚಳ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ: ಸಂತಸ ವ್ಯಕ್ತಪಡಿಸಿದ ಸಿಎಂ

Vidhana Soudha
Published on

ಬೆಂಗಳೂರು: ಕರ್ನಾಕಟದ ಅನುಸೂಚಿತ ಜಾತಿ ಮತ್ತು ಅನುಸೂಚಿತ ಪಂಗಡಗಳ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ಹೆಚ್ಚಿಸುವ ಬಗ್ಗೆ ನ್ಯಾಯಮೂರ್ತಿ ನಾಗಮೋಹನದಾಸ ಅವರ ಶಿಫಾರಸ್ಸನ್ನು ಒಪ್ಪಿ ಆಧ್ಯಾದೇಶವನ್ನು ಮಾಡಲು ಸಚಿವ ಸಂಪುಟ ತೀರ್ಮಾನಿಸಿದ್ದು, ಇಂದು ಅದಕ್ಕೆ ರಾಜ್ಯಪಾಲರು ಒಪ್ಪಿಗೆ ಸೂಚಿಸಿರುವುದು ಸಂತಸದ ಸಂಗತಿ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಈ ಕುರಿತು ಇಂದು ಅಧಿಕೃತವಾದ ವಿಶೇಷ ರಾಜ್ಯಪತ್ರವನ್ನು ಪ್ರಕಟಿಸಲಾಗಿದೆ. ಇದರಿಂದ ಇನ್ನು ಮುಂದೆ ಪರಿಶಿಷ್ಟ ಜಾತಿಯ ಮೀಸಲಾತಿ ಪ್ರಮಾಣ 15ರಿಂದ 17ಕ್ಕೆ ಏರಲಿದ್ದು, ಪರಿಶಿಷ್ಟ ಪಂಗಡಗಳ ಮೀಸಲಾತಿ ಪ್ರಮಾಣ ಶೇ. 3ರಿಂದ 7ಕ್ಕೆ ಏರಲಿದೆ.

ನಮ್ಮ ಸರ್ಕಾರವು ಮೀಸಲಾತಿ ಪ್ರಮಾಣ ಹೆಚ್ಚಿಸಿ ಬದ್ಧತೆಯಿಂದ ನಡೆದುಕೊಂಡಿದೆ. ಈ ಮೂಲಕ ಅನುಸೂಚಿತ ಜಾತಿ ಮತ್ತು ಪಂಗಡಗಳ ಜನಾಂಗಕ್ಕೆ ನಮ್ಮ ಸರ್ಕಾರ ದೀಪಾವಳಿ ಕೊಡುಗೆ ಕೊಟ್ಟಿದೆ ಎಂದು ತಿಳಿಸಿದ್ದಾರೆ.

ರಾಜ್ಯ ಸರ್ಕಾರದ ಸುಗ್ರೀವಾಜ್ಞೆಗೆ ಅಂಕಿತ ಹಾಕಿರುವ ಘನತೆವೆತ್ತ ರಾಜ್ಯಪಾಲರಿಗೆ ನಾನು ಕೃತಜ್ಞತೆ ಸಲ್ಲಿಸುತ್ತೇನೆ. ಈ ಆಧ್ಯಾದೇಶಕ್ಕೆ ವಿಧಾನಮಂಡಲದ ಎರಡೂ ಸದನದಲ್ಲಿ ಮಂಡಿಸಿ ಒಪ್ಪಿಗೆ ಪಡೆಯಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net