ವಿಷಾನಿಲ ದುರಂತ; ಮೃತರ ಕುಟುಂಬಗಳಿಗೆ ಒಂದು ಕೋಟಿ ರೂ. ಪರಿಹಾರ ಘೋಷಣೆ

Vizag
Published on

ವಿಶಾಖಪಟ್ಟಣ: ಆರ್​.ಆರ್​. ವೆಂಕಟಾಪುರಂನಲ್ಲಿರವ ಎಲ್​.ಜಿ ಪಾಲಿಮರ್ಸ್​ ಕಾರ್ಖಾನೆಯಲ್ಲಿ ಸಂಭವಿಸಿದ ವಿಷಾನಿಲ ದುರಂತದಲ್ಲಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಒಂದು ಕೋಟಿ ರೂ. ಪರಿಹಾರ ನೀಡುವುದಾಗಿ ಆಂಧ್ರಪ್ರದೇಶ ಸಿಎಂ ಜಗನ್​ಮೋಹನ್​ ರೆಡ್ಡಿ ಘೋಷಿಸಿದ್ದಾರೆ.

ದುರಂತದಲ್ಲಿ ಮೃತಪಟ್ಟವರ ಸಂಖ್ಯೆ 11ಕ್ಕೇರಿದ್ದು, ನೂರಾಋಉ ಜಜನರು ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದ್ಲಲದೇ, ಗಂಭೀರವಾಗಿ ಅಸ್ವಸ್ಥಗೊಂಡು ವೆಂಟಿಲೇಟರ್​ನಲ್ಲಿ ಚಿಕಿತ್ಸೆ ಪಡೆಯುತ್ತಿರುವವರು ಹತ್ತು ಲಕ್ಷ ರೂ.ಗಳನ್ನು ಪಡೆಯಲಿದ್ದಾರೆ. ಇದಲ್ಲದೇ, ಆಸ್ಪತ್ರೆಗಳಿಗೆ ದಾಖಲಾಗಿ ಸಾಮಾನ್ಯ ಚಿಕಿತ್ಸೆ ಪಡೆಯುತ್ತಿರುವ ಎಲ್ಲರಿಗೂ ತಲಾ ಒಂದು ಲಕ್ಷ ರೂ.ಗಳನ್ನು ನೀಡಲಾಗುತ್ತದೆ ಎಂದು ಸಿಎಂ ತಿಳಿಸಿದ್ದಾರೆ.

ಘಟನಾ ಸ್ಥಳದಲ್ಲಿ ಹಾಗೂ ಸುತ್ತಲಿನ ಪ್ರದೇಶದಲ್ಲಿ ವಿಷಾನಿಲದ ತೀವ್ರತೆಯನ್ನು ಕಡಿಮೆಗೊಳಿಸಲಾಗಿದೆ ಎಂದು ಡಿಜಿಪಿ ದಾಮೋದರ್​ ಗೌತಮ್​ ಸಾವಂಗ್​ ಮಾಹಿತಿ ನೀಡಿದ್ದಾರೆ.

ವಿಷಾನಿಲದಿಂದ ಅಸ್ವಸ್ಥಗೊಂಡವರು ಸಾಕಷ್ಟು ನೀರು ಕುಡಿಯುವುದರಿಂದ ಹಾಗೂ ಮುಖದ ಮೇಲೆ ಒದ್ದೆಯಾದ ಬಟ್ಟೆ ಹಾಕಿಕೊಳ್ಳುವುದರಿಂದ ಅಸ್ವಸ್ಥಗೊಳ್ಳುವುದುನ್ನು ತಡೆಯಬಹುದು. ಆಸ್ಪತ್ರೆಗೆ ದಾಖಲಾಗಿದ್ದ ಹಲವರು ಚೇತರಿಸಿಕೊಂಡು ಡಿಸ್ಚಾರ್ಜ್​ ಆಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net