

ನವದೆಹಲಿ: ಸಂಸತ್ತಿನ ಮುಂಗಾರು ಅಧಿವೇಶನ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರ ಇದೇ ಭಾನುವಾರ ಸರ್ವಪಕ್ಷ ಸಭೆ ಕರೆದಿದೆ. ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದು, ಅಂದು ಬೆಳಗ್ಗೆ 11 ಗಂಟೆಗೆ ಸಭೆ ಆರಂಭವಾಗಲಿದೆ.
ಅದೇ ದಿನ ಸಂಜೆ 4 ಗಂಟೆಗೆ ಸರ್ವಪಕ್ಷ ಸದನ ನಾಯಕರ ಸಭೆಯನ್ನು ಲೋಕಸಭೆ ಸ್ಪೀಕರ್ ಓಂ ಬಿರ್ಲಾ ಕರೆದಿದ್ದಾರೆ. ಭಾನುವಾರ ಸಂಜೆಯೇ ಎನ್ಡಿಎ ನಾಯಕರ ಸಭೆ ಕೂಡ ನಡೆಯಲಿದ್ದು, ಪ್ರಧಾನಿ ಮೋದಿ ಸಭೆಯಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಹಾದ್ ಜೋಶಿ ತಿಳಿಸಿದರು.
ಜುಲೈ 19ರಿಂದ ಮುಂಗಾರು ಅಧಿವೇಶನ ಆರಂಭವಾಗಕುದ್ದು, ಆಗಸ್ಟ್ 13 ರಂದು ಮುಕ್ತಾಯವಾಗಲಿದೆ. ಬೆಳಗ್ಗೆ 11 ಗಂಟೆಯಿಂದ ಸಂಜೆ 6ರವರೆಗೆ ಲೋಕಸಭೆ ಮತ್ತು ರಾಜ್ಯಸಭೆ ಕಲಾಪಗಳು ನಡೆಯಲಿದೆ. ಒಟ್ಟು 19 ದಿನ ಕಲಾಪಗಳು ನಡೆಯಲಿವೆ. (ಏಜೆನ್ಸೀಸ್)