ಸರ್ಕಾರ ಅಸ್ಥಿರಗೊಳಿಸುವ ಹೇಳಿಕೆ; ರಮೇಶ್ ಜಾರಕಿಹೊಳಿ ವಜಾಕ್ಕೆ ಸ್ಪೀಕರ್‌ಗೆ ದೂರು

ramesh jarakiholi (FILEminimizer)
Published on

ಬೆಂಗಳೂರು: ಶಾಸಕರನ್ನು ಕುದುರೆ ವ್ಯಾಪಾರ ಮಾಡಿ ಸರ್ಕಾರ ಅಸ್ಥಿರಗೊಳಿಸುವುದಾಗಿ ಪದೇ ಪದೆ ಹೇಳಿಕೆ ನೀಡುತ್ತಿರುವ ಶಾಸಕ ರಮೇಶ್ ಜಾರಕಿಹೊಳಿ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸುವಂತೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಸ್ಪೀಕರ್‌ಗೆ ಮನವಿ ಸಲ್ಲಿಸಿದೆ.

ಯಾವುದೇ ಸರ್ಕಾರ ಬಂದರೂ ಶಾಸಕ ರಮೇಶ್ ಜಾರಕಿಹೊಳಿ ಅವರು ಶಾಸಕರ ಕುದುರೆ ವ್ಯಾಪಾರ ಮಾಡಿ, ಸರ್ಕಾರ ಅಸ್ಥಿರಗೊಳಿಸುವ ಬಗ್ಗೆ ಪದೇ ಪದೆ ಹೇಳಿಕೆ ನೀಡುತ್ತಿದ್ದಾರೆ. ಇದು ಸ್ಪಷ್ಟವಾಗಿ ಸಂವಿಧಾನ ಮತ್ತು ಪ್ರಜಾಪ್ರಭುತ್ವ ವಿರೋಧಿಯಾಗಿದೆ. ಆದ್ದರಿಂದ ಅವರನ್ನು ಶಾಸಕ ಸ್ಥಾನದಿಂದ ವಜಾಗೊಳಿಸಿ, ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆ ರಕ್ಷಿಸಬೇಕು ಎಂದು ಕೆಪಿಸಿಸಿ ವಕ್ತಾರ ಪ್ರೊ.ಸಿ.ಎಸ್.ಸಿದ್ದರಾಜು ಸ್ಪೀಕರ್ ಅವರಿಗೆ ಮನವಿ ಮಾಡಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net