ತಾಲೂಕು ಆಸ್ಪತ್ರೆಯಲ್ಲಿ ವಿದ್ಯುತ್ ಅವಘಡದಿಂದ ಬೆಂಕಿ

IMG-20231223-WA0000
Published on

ಪುತ್ತೂರು: ತಾಲೂಕು ಸಾರ್ವಜನಿಕ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಬೆಂಕಿ ಅವಘಡ ಸಂಭವಿಸಿದ್ದು, ಅಗ್ನಿಶಾಮಕದಳ ಬೆಂಕಿ ನಂದಿಸುವಲ್ಲಿ ಯಶಸ್ಸಿಯಾಗಿದೆ.

ಹವಾನಿಯಂತ್ರಿತ ಘಟಕದಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡು ಬೆಂಕಿ ತಗುಲಿದ್ದು, ತಕ್ಷಣ ತೀವ್ರ ನಿಗಾ ಘಟಕದಲ್ಲಿದ್ದ ರೋಗಿಗಳನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ. ತಡರಾತ್ರಿಯೇ ಸ್ಥಳದಲ್ಲಿ ಸೇರಿದವರು ಸ್ವಚ್ಛತಾ ಕಾರ್ಯವನ್ನು ನಡೆಸುವ ಕಾರ್ಯ ಮಾಡಿದ್ದಾರೆ.

ವಿಜಯವಾಣಿ ಜತೆಗೆ ಮಾತನಾಡಿದ ಆಡಳಿತ ವೈದ್ಯಾಧಿಕಾರಿ ಆಶಾ ಪುತ್ತೂರಾಯ ಅವರು, ಹವಾನಿಯಂತ್ರಿತ ಘಟಕದ ಚಿಪ್ಪು ಒಡೆದ ಪರಿಣಾಮ ಬೆಂಕಿ ಕಾಣಿಸಿಕೊಂಡಿದೆ, ಹವಾನಿಯಂತ್ರಿತ ಯಂತ್ರ ಸಹಿತ ಅದರ ಬಳಿ ಇದ್ದ ಕೆಲವು ಉಪಕರಣಕ್ಕೆ ಹಾನಿಯಾಗಿದೆ. ತಿವ್ರ ನಿಗಾ ಘಟಕದಲ್ಲಿ ಇಬ್ಬರು ರೋಗಿಗಳಿದ್ದು, ಅವರನ್ನು ಸುರಕ್ಷಿತ ಸ್ಥಳಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಕ್ರಿಯಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net