

ಬೆಂಗಳೂರು: ರಾಜ್ಯದ ಎಲ್ಲ ನಾಡಕಚೇರಿಗಳಿಗೆ ಡೇಟಾ ಎಂಟ್ರಿ ಆಪರೇಟರ್ಗಳನ್ನು ಜಿಲ್ಲಾಧಿಕಾರಿಗಳ ಹಂತದಲ್ಲಿ ನೇಮಕಾರಿ ಮಾಡಿಕೊಳ್ಳಲು ಸರ್ಕಾರ ಅಗತ್ಯ ಮಾರ್ಗಸೂಚಿಗಳನ್ನು ಹೊರಡಿಸಿದೆ. ಅದರಂತೆ, 14 ಜಿಲ್ಲೆಗಳ ನಾಡಕಚೇರಿಗಳಲ್ಲಿ ಖಾಲಿಯಿರುವ 500ಕ್ಕೂ ಅಧಿಕ ಡೇಟಾ ಎಮಟ್ರಿ ಆಪರೇಟರ್ಗಳ ನೇಮಕಾತಿಗೆ ಅಧಿಸೂಚನೆ ಪ್ರಕಟಿಸಲಾಗಿದೆ.
ಅಟಲ್ಜೀ ಜನಸ್ನೇಹಿ ಕೇಂದ್ರಗಳಿಗೆ (ನಾಡಕಚೇರಿ) ಡೇಟಾ ಎಂಟ್ರಿ ಆಪರೇಟರ್ಗಳನ್ನು ಹೊಗುತ್ತಿ್ಎ ಆಧಾರದಲ್ಲಿ ನೇಮಕಾತಿ ಮಾಡಿಕೊಳ್ಳಲಾಗುತ್ತದೆ. ಇದಕ್ಕಾಗಿ ಜಿಲ್ಲಾಮಟ್ಟದಲ್ಲಿ ಟೆಂಡರ್ ಕರೆಯುವ ಹಾಗೂ ನೇಂಕಾತಿ ನಡೆಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳಿಗೆ ನೀಡಲಾಗಿದೆ.
ವಿವಿಧ ಜಿಲ್ಲೆಗಳಲ್ಲಿ ನೇಮಕ ಮಾಡಿಕೊಳ್ಳಲಿರುವ ಡೇಟಾ ಎಂಟ್ರಿ ಆಪರೇಟರ್ಗಳು:
ಚಾಮರಾಜನಗರ- 22, ಚಿಕ್ಕಮಗಳೂರು-44, ಚಿತ್ರದುರ್ಗ-31, ದಕ್ಷಿಣಕನ್ನಡ-27, ಧಾರವಾಡ-24, ಗದಗ-21, ಹಾವೇರಿ-33, ಕೊಪ್ಪಳ-28, ಮಂಡ್ಯ-55, ಮೈಸೂರು-47, ರಾಯಚೂರು-45, ರಾಮನಗರ-23, ಶಿವಮೊಗ್ಗ-52, ಉತ್ತರಕನ್ನಡ ಜಿಲ್ಲೆಯಲ್ಲಿ 52 ಡೇಟಾ ಎಂಟ್ರಿ ಆಪರೆಟರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲಾಗುತ್ತದೆ.
ಹೆಚ್ಚುವರಿ ಹುದ್ದೆಗಳು ಸ್ಥಗಿತ: ಈ-ಕ್ಷಣ ಯೋಜನೆಯಲ್ಲಿ ಡೇಟಾ ಎಂಟ್ರಿ ಕೆಲಸ ಶೇ.70 ಮುಗಿದಿರುವುದರಿಂದ ಅವರ ಸೇವೆಯನ್ನು ಸ್ಥಗಿತಗೊಳಿಸಲು ಸರ್ಕಾರ ಸೂಚಿಸಿದೆ. ಜತೆಗೆ, ಹೆಚ್ಚುವರಿ ಡೇಟಾ ಎಂಟ್ರಿ ಆಪರೇಟರ್ಗಳ ಸೇವೆಯನ್ನು ನಿಲ್ಲಿಸುವಂತೆ ಈಗಾಗಲೇ ಆದೇಶ ಹೊರಡಿಸಿದೆ.
ಒಟ್ಟಾರೆ ರಾಜ್ಯದ ಎಲ್ಲ ನಾಡಕಚೇರಿಗಳಿಗೆ ಈ ಮೊದಲು ನಿಗದಿಪಡಿಸಿದ 1,916 ಡೇಟಾ ಎಂಟ್ರಿ ಆಪರೇಟರ್ಗಳ ಬದಲು ಈಗ 1,121 ಜನರನ್ನು ನೇಮಕ ಮಾಡಿಕೊಳ್ಳುವಂತೆ ಸರ್ಕಾರ ತಿಳಿಸಿದೆ.
ಕೆಲ ಜಿಲ್ಲೆಗಳಲ್ಲಿ ನೇಮಕಾತಿ ಪ್ರಕ್ರಿಯೆ ಆರಂಭವಾಗದ ಕಾರಣ, ಕೂಡಲೇ ಭರ್ತಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿಗಳಿಗೆ ಅಟಲ್ಜೀ ಜನಸ್ನೇಹಿ ನಿರ್ದೇಶನಾಲಯದ ನಿರ್ದೇಶಕರು ಸೂಚಿಸಿದ್ದಾರೆ.