ವಿದೇಶದಿಂದ ಕಂಪ್ಯೂಟರ್, ಲ್ಯಾಪ್‌ಟಾಪ್ ಆಮದಿಗೆ ಕೇಂದ್ರದಿಂದ ನಿರ್ಬಂಧ: ತಕ್ಷಣದಿಂದಲೇ ಜಾರಿ, ಮೇಕ್ ಇನ್ ಇಂಡಿಯಾಗೆ ಒತ್ತು

laptop
ಸಾಂದರ್ಭಿಕ ಚಿತ್ರ
Published on

ದೆಹಲಿ: ಲ್ಯಾಪ್‌ಟಾಪ್, ಟ್ಯಾಬ್ಲೆಟ್‌ಗಳು ಮತ್ತು ಪರ್ಸನಲ್ ಕಂಪ್ಯೂಟರ್‌ಗಳ ಆಮದು ನಿರ್ಬಂಧ ತಕ್ಷಣವೇ ಜಾರಿಗೆ ಬರುವಂತೆ ಕೇಂದ್ರ ಸರ್ಕಾರ ಸೂಚಿಸಿದೆ ಎಂದು ವಿದೇಶಿ ವ್ಯಾಪಾರದ ಮಹಾನಿರ್ದೇಶನಾಲಯವು (ಡಿಜಿಎಫ್​ಟಿ) ತಿಳಿಸಿದೆ.

ಮಾನ್ಯವಾದ ಪರವಾನಗಿ ಇದ್ದರೆ ಮಾತ್ರ ಇವುಗಳ ಆಮದಿಗೆ ಅನುಮತಿಯನ್ನು ನೀಡಲಾಗಿದ್ದು, HSN 8741 ಅಡಿಯಲ್ಲಿ ಬರುವ ಸರ್ವರ್‌, ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್‌ಗಳು ಮತ್ತು ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಆಮದು ನಿರ್ಬಂಧಿತ ವಸ್ತುಗಳಾಗಿವೆ.

ಇದನ್ನೂ ಓದಿ: ಮಗು ಹುಟ್ಟಿದ್ದಕ್ಕೆ ಸಿಹಿ ಹಂಚಿದ ರೈತ: ಮದ್ಯ ಕೊಡಿಸುವಂತೆ ಹಲ್ಲೆಗೈದು ಪ್ರಾಣ ತೆಗೆದ ನಾಲ್ವರು

ಬ್ಯಾಗೇಜ್ ನಿಯಮಗಳ ಅಡಿಯಲ್ಲಿ ಮಾಡಿಕೊಳ್ಳಲಾಗುವ ಆಮದುಗಳಿಗೆ ಈ ನಿರ್ಬಂಧವು ಅನ್ವಯಿಸುವುದಿಲ್ಲ ಎಂದು ಹೇಳಲಾಗಿದ್ದು, ಇ-ಕಾಮರ್ಸ್ ಪೋರ್ಟಲ್‌ಗಳಿಂದ ಪೋಸ್ಟ್ ಅಥವಾ ಕೊರಿಯರ್ ಮೂಲಕ ಖರೀದಿಸಿದ 1 ಲ್ಯಾಪ್‌ಟಾಪ್, ಟ್ಯಾಬ್ಲೆಟ್, ಆಲ್-ಇನ್-ಒನ್ ಪರ್ಸನಲ್ ಕಂಪ್ಯೂಟರ್ ಅಥವಾ ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗೆ ವಿನಾಯಿತಿಯನ್ನು ಒದಗಿಸಲಾಗಿದೆ ಎಂದು ತಿಳಿಸಲಾಗಿದೆ.

ಸಂಶೋಧನೆ ಮತ್ತು ಅಭಿವೃದ್ಧಿ, ಪರೀಕ್ಷೆ, ಬೆಂಚ್‌ಮಾರ್ಕಿಂಗ್ ಮತ್ತು ಮೌಲ್ಯಮಾಪನ ದುರಸ್ತಿ ಮತ್ತು ಮರು-ರಫ್ತು ಮತ್ತು ಉತ್ಪನ್ನ ಅಭಿವೃದ್ಧಿ ಉದ್ದೇಶಗಳಂತಹ 20 ವಸ್ತುಗಳಿಗೂ ವಿನಾಯಿತಿಯನ್ನು ಒದಗಿಸಲಾಗಿದೆ ಎಂದು ಸರ್ಕಾರ ಹೇಳಿದೆ. ಲ್ಯಾಪ್‌ಟಾಪ್‌ಗಳು, ಟ್ಯಾಬ್ಲೆಟ್‌ಗಳು, ಪರ್ಸನಲ್ ಕಂಪ್ಯೂಟರ್‌ಗಳು ಮತ್ತು ಅಲ್ಟ್ರಾ ಸ್ಮಾಲ್ ಫಾರ್ಮ್ ಫ್ಯಾಕ್ಟರ್ ಕಂಪ್ಯೂಟರ್‌ಗಳು ಮತ್ತು ಸರ್ವರ್‌ಗಳನ್ನು ಆಮದಿಗೆ ವಿನಾಯಿತಿ ನೀಡಲಾಗುತ್ತದೆ ಎಂದು ಡಿಜಿಎಫ್​ಟಿ ಹೇಳಿದೆ.(ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net