ಹಿಂದಿ ಶಿಕ್ಷಕರಿಗೆ ಹಿಂಬಡ್ತಿ ನೀಡಿದ ಸರ್ಕಾರ

Teacher (1)
Published on

ಬೆಂಗಳೂರು: 2016 ರ ವೃಂದ ಮತ್ತು ನೇಮಕಾತಿ ನಿಯಮಗಳಂತೆ 2015ರ ಮಾ.23 ರಿಂದ ಅನ್ವಯವಾಗುವಂತೆ ಹಿಂದಿ ತತ್ಸಮಾನ ಪದವಿ ಮತ್ತು ಬಿಇಡಿ ತತ್ಸಮಾನ ಪಡೆದ ಪ್ರಾಥಮಿಕ ಶಾಲಾ ಶಿಕ್ಷಕರು, ಪ್ರೌಢಶಾಲಾ ಹಿಂದಿ ಸಹ ಶಿಕ್ಷಕರಾಗಿ ಪಡೆದಿದ್ದ ಬಡ್ತಿಯನ್ನು ಹಿಂಪಡೆಯಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ನ್ಯಾಯಾಲಯದ ಆದೇಶದ ಹಿನ್ನೆಲೆಯಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಬಡ್ತಿ ಹಿಂಪಡೆದ ಶಿಕ್ಷಕರಿಗೆ ಆಯಾ ಜಿಲ್ಲೆಗಳಲ್ಲಿ ಖಾಲಿ ಇರುವ ಪ್ರಾಥಮಿಕ ಶಾಲಾ ಶಿಕ್ಷಕರ ಹುದ್ದೆಗಳಿಗೆ ಕೌನ್ಸೆಲಿಂಗ್‌ ಮೂಲಕ ನಿಯಮಾನುಸಾರ ಸ್ಥಳ ನಿಯುಕ್ತಿಗೊಳಿಸಬೇಕು ಎಂದು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net