ಸತ್ಯಪರತೆಯಿಂದ ಸರ್ವತೋಮುಖ ಅಭಿವೃದ್ಧಿ

nitte
ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ 2023-2024ನೇ ಶೈಕ್ಷಣಿಕ ಸಾಲಿನ ಪದವಿ ಪ್ರದಾನ ಸಮಾರಂಭ ನಡೆಯಿತು
Published on

ವಿಜಯವಾಣಿ ಸುದ್ದಿಜಾಲ ಕಾರ್ಕಳ

ಪದವಿ ಎಂಬುದು ಶಿಕ್ಷಣದ ಅಂತಿಮ ಹಂತವಲ್ಲ. ಜೀವನದಲ್ಲಿ ಕಾಣಬಹುದಾದ ವಿವಿಧ ಬಗೆಯ ಕಲಿಕೆ ಹಾಗೂ ಅನುಭವಗಳ ಆರಂಭಿಕ ಹಂತ. ಸತ್ಯವನ್ನೇ ಮಾತನಾಡಿ ಸತ್ಯಪರತೆಯಿಂದ ನಡೆದರೆ ಜೀವನದ ಸರ್ವತೋಮುಖ ಅಭಿವೃದ್ಧಿ ಸಾಧ್ಯ ಎಂದು ಬೆಳಗಾವಿ ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾಲಯ ಕುಲಸಚಿವ ಡಾ.ಬಿ.ಇ.ರಂಗಸ್ವಾಮಿ ಹೇಳಿದರು.

ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಶನಿವಾರ 2023-2024ನೇ ಶೈಕ್ಷಣಿಕ ಸಾಲಿನ ಪದವಿ ಪ್ರದಾನ ಸಮಾರಂಭದಲ್ಲಿ ಮಾತನಾಡಿದರು.

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆ ಅಧ್ಯಕ್ಷ ಎನ್.ವಿನಯ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು. ಶೈಕ್ಷಣಿಕ ಸಾಧನೆಗೈದ 18 ವಿದ್ಯಾರ್ಥಿಗಳನ್ನು ಚಿನ್ನ ಮತ್ತು ಬೆಳ್ಳಿ ಪದಕ ನೀಡಿ ಗೌರವಿಸಲಾಯಿತು. ಬಿ.ಇ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಯಿತು. ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಟೆಕ್ನಿಕಲ್ ಎಜುಕೇಶನ್ ವಿಭಾಗದ ವೈಸ್ ಪ್ರೆಸಿಡೆಂಟ್ ಡಾ.ಗೋಪಾಲ್ ಮುಗೆರಾಯ, ನಿಟ್ಟೆ ಶಿಕ್ಷಣ ಸಂಸ್ಥೆ ಸಲಹೆಗಾರ ಪ್ರೊ.ಗೋಪಿನಾಥ್, ನಿಟ್ಟೆ ವಿಶ್ವವಿದ್ಯಾಲಯ ಕರಿಕುಲಮ್ ಡೆವಲಪ್ಮೆಂಟ್ ನಿರ್ದೇಶಕ ಡಾ.ನಾಗೇಶ್ ಪ್ರಭು, ನಿಟ್ಟೆ ಪರಿಗಣಿಸಲ್ಪಟ್ಟ ವಿಶ್ವವಿದ್ಯಾಲಯ ಆಫ್ ಕ್ಯಾಂಪಸ್ ಸೆಂಟರ್ ಉಪ ಕುಲಸಚಿವೆ ಡಾ.ರೇಖಾ ಭಂಡಾರ್ಕಾರ್, ಉಪ ಪರೀಕ್ಷಾ ನಿಯಂತ್ರಕ ಡಾ.ಸುಬ್ರಹ್ಮಣ್ಯ ಭಟ್, ನಿಟ್ಟೆ ತಾಂತ್ರಿಕ ಕಾಲೇಜಿನ ಇಂಡಸ್ಟ್ರಿ ಇನ್‌ಸ್ಟಿಟ್ಯೂಟ್ ಇಂಟರಾಕ್ಷನ್ ನಿರ್ದೇಶಕ ಡಾ.ಪರಮೇಶ್ವರನ್, ಸ್ಟೂಡೆಂಟ್ ವೆಲ್ಫೇರ್, ಆರ್‌ಡಿ ಡೀನ್‌ಗಳು ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಡಾ.ಶ್ರೀನಿವಾಸ್ ರಾವ್ ಬಿ.ಆರ್. ಪದವಿಪ್ರದಾನ ಸಮಾರಂಭದ ಮೆರವಣಿಗೆ ಮುನ್ನಡೆಸಿದರು.

ನಿಟ್ಟೆ ತಾಂತ್ರಿಕ ಮಹಾವಿದ್ಯಾಲಯ ಪ್ರಾಂಶುಪಾಲ ಡಾ.ನಿರಂಜನ್ ಎನ್.ಚಿಪ್ಳೂಣ್ಕರ್ ವಾರ್ಷಿಕ ವರದಿ ವಾಚಿಸಿದರು. ಉಪಪ್ರಾಂಶುಪಾಲ ಡಾ.ಐ.ಆರ್.ಮಿತ್ತಂತಾಯ ಚಿನ್ನ ಹಾಗೂ ಬೆಳ್ಳಿ ಪದಕ ಗಳಿಸಿದ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಸಹಾಯಕ ಪರೀಕ್ಷಾ ನಿಯಂತ್ರಕ ಡಾ.ವೆಂಕಟೇಶ್ ಕಾಮತ್ ವಂದಿಸಿದರು. ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಡಾ.ಶಶಾಂಕ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.

ಕರಾವಳಿ ಜನರಿಗೆ ಗುಣಮಟ್ಟದ ಶಿಕ್ಷಣ ನೀಡುವಲ್ಲಿ ನಿಟ್ಟೆ ವಿದ್ಯಾಸಂಸ್ಥೆ ಪಾತ್ರ ಮಹತ್ವದ್ದು. ಯಶಸ್ಸಿನ ಹಿಂದೆ ಜ್ಞಾನ, ಪ್ರಾಮಾಣಿಕ ಪ್ರಯತ್ನ ಹಾಗೂ ಆದರ್ಶಪ್ರಾಯರಾದ ವ್ಯಕ್ತಿಯನ್ನು ನಾವು ಕಾಣಬಹುದು. ತಮ್ಮ ವೈಯಕ್ತಿಕ ಏಳಿಗೆಯಿಂದ ಹಲವರ ಏಳಿಗೆಗೆ ಸಹಾಯವಾಗುವಂತೆ ಮಾಡಬೇಕು.-ಡಾ.ಗೋಪಾಲ್ ಮುಗೆರಾಯ, ಉಪಾಧ್ಯಕ್ಷ ನಿಟ್ಟೆ ಡೀಮ್ಡ್ ಟು ಬಿ ವಿಶ್ವವಿದ್ಯಾಲಯದ ಟೆಕ್ನಿಕಲ್ ಎಜುಕೇಶನ್ ವಿಭಾಗ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net