ಗ್ರಾಪಂ ಚುನಾವಣೆ ಮುಂದೂಡಿಕೆ|GP Election

VVPAT-Election-voting-2-scaled
Published on

ಬೆಂಗಳೂರು: ವಿವಿಧ ಕಾರಣಗಳಿಂದ ಖಾಲಿ ಇರುವ/ತೆರವಾಗಿರುವ ಗ್ರಾಮ ಪಂಚಾಯಿತಿ 259 ಸದಸ್ಯ ಸ್ಥಾನಗಳಿಗೆ ಮೇ 11 ರಂದು ನಡೆಯಬೇಕಿದ್ದ ಚುನಾವಣೆಯನ್ನು ರಾಜ್ಯ ಚುನಾವಣಾ ಆಯೋಗ ಮುಂದೂಡಿದೆ((GP elections postponed) .

31 ಜಿಲ್ಲೆಯ 133 ತಾಲೂಕುಗಳ 222 ಗ್ರಾಮ ಪಂಚಾಯಿತಿಗಳಲ್ಲಿನ 259 ಸದಸ್ಯ ಸ್ಥಾನಗಳಿಗೆ ಚುನಾವಣೆ ೋಷಣೆ ಮಾಡಲಾಗಿತ್ತು. ಏ.22 ರಂದು ಈ ಚುನಾವಣೆಗೆ ಜಿಲ್ಲಾಧಿಕಾರಿ ಅಧಿಸೂಚನೆ ಹೊರಡಿಸುವವರಿದ್ದರು. ಆದರೆ, ಸರ್ಕಾರದ ಮುಖ್ಯ ಕಾರ್ಯದಶಿಗಳು ಹಾಗೂ ಕೆಲವು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಾನೂನು ಸುವ್ಯವಸ್ಥೆ ಪರಿಪಾಲನೆ ಹಾಗೂ ಇತರೆ ಸಮಸ್ಯೆಗಳ ಹಿನ್ನೆಲೆಯಲ್ಲಿ ಚುನಾವಣೆ ಮುಂದೂಡುವಂತೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ಆಯೋಗ ಚುನಾವಣೆಯನ್ನು 15 ದಿನ ಕಾಲ ಮುಂದೂಡಿ ಆದೇಶಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net