ಕತಾರ್​ನಲ್ಲಿ ಕಬ್ಜ ಚಿತ್ರದ ಅದ್ದೂರಿ ಪ್ರದರ್ಶನ; ಕೇಕ್ ಕತ್ತರಿಸಿ ಸಂಭ್ರಮಿಸಿದ ಅಭಿಮಾನಿಗಳು

Kabza
Published on

ಕತಾರ್: ದೋಹ ಕತಾರ್​ನಲ್ಲಿ ಕರ್ನಾಟಕ ಸಂಘ ಕತಾರ್ ಹಾಗೂ ಕೋರ್ಸಿಸ್ ಕನ್ನಡ ಮೂವೀಸ್ ಸಂಯೋಗದೊಂದಿಗೆ ರಿಯಲ್ ಸ್ಟಾರ್ ಉಪೇಂದ್ರ, ಕಿಚ್ಚ ಸುದೀಪ್ ಹಾಗೂ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ನಟಿಸಿರುವ, ಆರ್ ಚಂದ್ರು ನಿರ್ದೇಶನದ ಕಬ್ಜ ಸಿನಿಮಾವು ವಿಶೇಷ ಪ್ರದರ್ಶನ ಕಾಣುತ್ತಿದೆ.

ಕಬ್ಜ ಚಿತ್ರವು ಕತಾರ್​ನಲ್ಲಿ ಮೊಟ್ಟಮೊದಲ ಬಾರಿಗೆ 11 ಕಿಂತ ಹೆಚ್ಚು ಚಿತ್ರಮಂದಿರಗಳಲ್ಲಿ ಯಶಸ್ವಿಯಾಗಿ ಪ್ರದರ್ಶನಗೊಳ್ಳುತ್ತಿದೆ. ಪೂರ್ಣವಾಗಿ ಸ್ಕ್ರಿಪ್ಟ್, ಸ್ಕ್ರೀನ್ ಪ್ಲೇ, ಚಿತ್ರಕಥೆ ಪ್ರೇಕ್ಷಕರ ಮೆಚ್ಚುಗೆಗೆ ಕಾರಣವಾಗಿದೆ. ಅಂತೆಯೇ ಉಪೇಂದ್ರ ಹಾಗೂ ಕಿಚ್ಚ ಸುದೀಪ್ ಅಭಿಮಾನಿಗಳು ಕೇಕ್ ಕತ್ತರಿಸಿ ಹಂಚುವ ಮೂಲಕ ಸಂಭ್ರಮಾಚರಣೆ ಮಾಡಿದ್ದಾರೆ.

ಕರ್ನಾಟಕ ಸಂಘ ಕತಾರ್ ಅಧ್ಯಕ್ಷ ಮಹೇಶ್ ಗೌಡ, ಭಾರತೀಯ ಸಾಂಸ್ಕೃತಿಕ ಕೇಂದ್ರದ ಉಪಾಧ್ಯಕ್ಷ ಸುಬ್ರಹ್ಮಣ್ಯ ಹೆಬ್ಬಾಗಿಲು ಮತ್ತು ಪ್ರಭುರಾಜ್ ಅವರು ಕತಾರ್​ನಲ್ಲಿ ವಿಶೇಷ ಪ್ರದರ್ಶನ ಏರ್ಪಡಿಸಿದ್ದಾರೆ.

ಇದೇ ವೇಳೆ ಮಹೇಶ್ ಗೌಡ ಅವರು ಮಾತನಾಡಿ, ಕಬ್ಜ ಚಿತ್ರವು 100 ದಿನಗಳು ಯಶಸ್ವಿಯಾಗಿ ಸಾಗಲಿ ಎಂದು ಹಾರೈಸಿದ್ದಾರೆ, ಸುಬ್ರಮಣ್ಯ ಹೆಬ್ಬಾಗಿಲು ಅವರು ಮಾತನಾಡಿ ಕನ್ನಡ ಸಿನಿಮಾಗಳು ಕತಾರ್​ನಲ್ಲಿ ಇದೇ ರೀತಿ ಅದ್ದೂರಿಯಾಗಿ ತೆರೆಗೊಳ್ಳಲು ಪ್ರಯತ್ನ ಮಾಡುತ್ತೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net