ಖಾಸಗಿ ಶಾಲೆಗಳ ಶೈಕ್ಷಣಿಕ ಸಮಾವೇಶ ಇಂದು

dj clk sudhigoshti
Published on

ಚಳ್ಳಕೆರೆ: ನಗರದಲ್ಲಿ ಅನುದಾನ ರಹಿತ ಶಾಲೆಗಳ ರಾಜ್ಯ ಮಟ್ಟದ ಐದು ಸಂಘಟನೆಗಳ ಸಹಯೋಗದಲ್ಲಿ ಬುಧವಾರ (ಸೆ.27) ಗುರು ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ರಾಜ್ಯ ಮಟ್ಟದ ಶೈಕ್ಷಣಿಕ ಸಮಾವೇಶ, ಶಿಕ್ಷಕರ ದಿನಾಚರಣೆ ಮತ್ತು ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಸಮಾರಂಭ ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಯಾದಲಗಟ್ಟೆ ಜಗನ್ನಾಥ ಹೇಳಿದರು.

ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, ಖಾಸಗಿ ಸಂಸ್ಥೆಗಳ ಬಹುವರ್ಷಗಳ ಬೇಡಿಕೆ ಸರ್ಕಾರದ ಹಂತದಲ್ಲಿ ಬಗೆಹರಿಯುತ್ತಿಲ್ಲ.

ಸಮಾಜದಲ್ಲಿನ ಶಿಕ್ಷಣ ಪ್ರಗತಿಗೆ ದುಡಿಯುವ ಖಾಸಗಿ ಶಾಲಾ ಸಂಸ್ಥೆಗಳ ಪರಿಹಾರಕ್ಕೆ ವಿವಿಧ ಸಂಘಟನೆಗಳು ಒಗ್ಗೂಡಿ ಈ ಸಮಾವೇಶ ಹಮ್ಮಿಕೊಳ್ಳಲಾಗಿದೆ. ಶೈಕ್ಷಣಿಕ ಜಾಥಾ ಆಯೋಜಿಸಿದ್ದು, ಮುಖಂಡರು, ಸದಸ್ಯರು ಪಾಲ್ಗೊಳ್ಳಲಿದ್ದಾರೆ ಎಂದರು.

ಸಿರಿಗೆರೆ ತರಳಬಾಳು ಜಗದ್ಗುರು ಬೃಹನ್ಮಠದ ಡಾ.ಶಿವಮೂರ್ತಿ ಶಿವಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು, ಶಿಕ್ಷಣ ಸಚಿವ ಮಧು ಬಂಗಾರಪ್ಪ,

ಶಾಸಕ ಟಿ.ರಘುಮೂರ್ತಿ, ಕೇಂದ್ರ ಸಚಿವ ಎ.ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್, ಶಾಸಕರಾದ ಎನ್.ವೈ.ಗೋಪಾಲಕೃಷ್ಣ,

ಕೆ.ಸಿ.ವೀರೇಂದ್ರ ಪಪ್ಪಿ, ಬಿ.ಜಿ.ಗೋವಿಂದಪ್ಪ, ಎಂ. ಚಂದ್ರಪ್ಪ, ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಕೆ.ಎಸ್.ನವೀನ್ ಇತರರು ಪಾಲ್ಗೊಳ್ಳಲಿದ್ದಾರೆ ಎಂದು ತಿಳಿಸಿದರು.

ಪಿ.ದಯಾನಂದ ಪ್ರಹ್ಲಾದ್, ಡಾ.ಕೆ.ಎಂ.ಜಯಕುಮಾರ್, ಎಚ್.ಎಸ್.ರಾಜೇಶ್ ಗುಪ್ತಾ, ಚಿಕ್ಕಣ್ಣ, ಟಿ.ಬಾಲಯ್ಯ, ಡಿ.ಆರ್.ಕಿರಣ್, ಪಿ.ಬೋರಸ್ವಾಮಿ, ಆರ್.ಶ್ರೀನಿವಾಸಚಾರ್, ಕೆ.ಪಿ.ನಾಗಭೂಷಣ್, ಪ್ರಭಾಕರ್, ಶಿವಗಂಗಮ್ಮ ಇತರರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net