ಅನುದಾನ ಪಡೆಯಲು ಕಾಟಾಚಾರದ ಕಾಮಗಾರಿ ಮಾಡುವುದು ಸರಿಯಲ್ಲ

21 KKP 101
Published on

ಕನಕಪುರ :  ತಾಲೂಕಿನ ಕಸಬಾ ಹೋಬಳಿ ನಾರಾಯಣಪುರ ಗ್ರಾಮ ಪಂಚಾಯಿತಿ ಆವರಣದಲ್ಲಿ 2020-21ನೇ ಸಾಲಿನ ಮೊದಲ ಮತ್ತು ಎರಡನೇ ಸುತ್ತಿನ ಸಾವಾಜಿಕ ಲೆಕ್ಕ ಪರಿಶೋಧನಾ ಗ್ರಾಮಸಭೆ ಮಂಗಳವಾರ ನಡೆಯಿತು. ಸಭೆ ಅಧ್ಯಕ್ಷತೆ ವಹಿಸಿದ್ದ ಅಕ್ಷರ ದಾಸೋಹ ಸಹಾಯಕ ನಿರ್ದೇಶಕಿ ಸವಿತಾ ಕುವಾರಿ ವಾತನಾಡಿ, ಗ್ರಾಮಗಳ ಅಭಿವೃದ್ಧಿಗೆ ಪೂರಕವಾಗಿರುವ ನರೇಗಾ ಕಾಮಗಾರಿಗಳನ್ನು ಅಗತ್ಯಕ್ಕೆ ತಕ್ಕಂತೆ ಬಳಸಿಕೊಳ್ಳಬೇಕು.

ಕೇವಲ ಅನುದಾನ ಪಡೆಯುವುದಕ್ಕಾಗಿ ಕಾಟಾಚಾರಕ್ಕೆ ಕಾಮಗಾರಿ ಮಾಡುವುದು ಸರಿಯಲ್ಲ. ಕಾಮಗಾರಿಗಳು ಸಮರ್ಪಕವಾಗಿ ಜಾರಿಯಾದಾಗ ಯೋಜನೆಗೆ ಮಹತ್ವ ಬರುತ್ತದೆ. ಕೇಂದ್ರ ಸರ್ಕಾರದ ಅನುದಾನಿತ ಉದ್ಯೋಗ ಖಾತ್ರಿ ಯೋಜನೆಯ ನಿಯಮ ಉಲ್ಲಂನೆಯಾಗದಂತೆ ಬಳಸಿಕೊಳ್ಳಬೇಕು ಎಂದರು. ಕರೊನಾ ಸಮಯದಲ್ಲಿ ಶಾಲಾ ಮಕ್ಕಳಿಗೆ ನೀಡುವ ಬಿಸಿಯೂಟದ ಪದಾರ್ಥಗಳನ್ನು ಕೇವಲ 2 ತಿಂಗಳ ಮಟ್ಟಿಗೆ ಸ್ಥಗಿತಗೊಳಿಸಿ, ಬದಲಾಗಿ ವಿದ್ಯಾರ್ಥಿಗಳ ಖಾತೆಗೆ ನೇರವಾಗಿ ಅದರ ಹಣವನ್ನು ವರ್ಗಾಯಿಸಲಾಗುತ್ತಿದೆ ಎಂದರು.

ಸಾವಾಜಿಕ ಲೆಕ್ಕ ಪರಿಶೋಧನೆಯ ಜಿಲ್ಲಾ ಸವಾಲೋಚಕ ಶ್ರೀನಿವಾಸ್ ವಾತನಾಡಿ, ಪ್ರಸಕ್ತ ಸಾಲಿನಲ್ಲಿ 387 ಕಾಮಗಾರಿಗಳು ಪೂರ್ಣಗೊಂಡಿವೆ ಎಂದು ಮಾಹಿತಿ ನೀಡಿದರು.

ಗ್ರಾಪಂ ಅಧ್ಯಕ್ಷೆ ಪಾರ್ವತಿ, ಉಪಾಧ್ಯಕ್ಷೆ ಟಿ.ಕೆ. ಮಮತಾ, ಅಭಿವೃದ್ಧಿ ಅಧಿಕಾರಿ ಬಿ.ಎಲ್. ಆಶಾ, ಸದಸ್ಯರಾದ ಪ್ರಶಾಂತಕುವಾರ್, ಚಾಮುಂಡಿ, ಮುನಿಯಪ್ಪ, ಕಮಲಮ್ಮ, ಲಕ್ಷ್ಮಮ್ಮ ಹಾಗೂ ಗ್ರಾಮಸ್ಥರು ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net