ಶಿಕ್ಷಕರ ವರ್ಗಾವಣೆಗೆ ಸಿಕ್ತು ಗ್ರೀನ್ ಸಿಗ್ನಲ್​: ಮಂಜೂರು ಹುದ್ದೆಗಳ ಸಂಖ್ಯೆ ಆಧಾರದ ಮೇಲೆ ಟ್ರಾನ್ಸ್​ಫರ್​

teacher
Published on

ಬೆಂಗಳೂರು: ರಾಜ್ಯಾದ್ಯಂತ ಇರುವ ಶಿಕ್ಷಕರ ಬೇಡಿಕೆಯಂತೆ ಇದೀಗ ಸರ್ಕಾರದಿಂದ ಸಿಹಿಸುದ್ದಿಯೊಂದು ಹೊರಬಿದ್ದಿದ್ದು, ಶಿಕ್ಷಕರ ವರ್ಗಾವಣೆಗೆ ಗ್ರೀನ್​ ಸಿಗ್ನಲ್​ ಸಿಕ್ಕಿದೆ. ಪ್ರಾಥಮಿಕ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಚ್.ಎಸ್. ಶಿವಕುಮಾರ್ ಈ ಕುರಿತು ಆದೇಶ ಹೊರಡಿಸಿದ್ದಾರೆ.

ಶಿಕ್ಷಕರ ವರ್ಗಾವಣೆಗೆ ಸಂಬಂಧಿಸಿದಂತೆ ಯಾವುದೇ ಘಟಕದಲ್ಲಿ ಮಂಜೂರಾದ ಹುದ್ದೆಗಳ ಸಂಖ್ಯೆಯ ಆಧಾರದ ಮೇಲೆ ಶೇಕಡವಾರು ಮಿತಿ ಲೆಕ್ಕಾಚಾರ ಮಾಡಿ ವರ್ಗಾವಣೆ ಪ್ರಕ್ರಿಯೆಯನ್ನು ಮುಂದುವರಿಸಬಹುದು ಎಂದು ಅವರು ತಿಳಿಸಿದ್ದಾರೆ.

ಶಿಕ್ಷಕರ ವರ್ಗಾವಣೆ ಸಂಬಂಧ ಸರ್ಕಾರದ ಆದೇಶದ ಕುರಿತು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಶಿಕ್ಷಣ ಸಚಿವರು ಮತ್ತು ಸರ್ಕಾರದ ಕಾರ್ಯದರ್ಶಿ ಹಾಗೂ ಆಯುಕ್ತರಿಗೆ ಧನ್ಯವಾದಗಳನ್ನು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net