ಕರೊನಾ ಮುಕ್ತ ಜಿಲ್ಲೆ ಗಾದಿಗೇರಿದ ಚಾಮರಾಜನಗರ!

Chamarajanagar photo
Published on

ಚಾಮರಾಜನಗರ: ಮುಂಬೈನಿಂದ ಜಿಲ್ಲೆಗೆ ವಲಸೆ ಬಂದಿದ್ದ ಕರೊನಾ ಸೋಂಕಿತ ಸಂಪೂರ್ಣ ಗುಣಮುಖನಾಗಿದ್ದು, ಆತನನ್ನು ಸದ್ಯದಲ್ಲೇ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ಶಿಕ್ಷಣ ಸಚಿವರೂ ಆದ ಜಿಲ್ಲಾ ಉಸ್ತುವಾರಿ ಸಚಿವ ಸುರೇಶ್ ಕುಮಾರ್ ಹೇಳಿದರು.

ಜಿಲ್ಲಾ ಪ್ರವಾಸ ಕೈಗೊಂಡಿರುವ ಸಚಿವರು ನಗರದ ಜಿಲ್ಲಾಸ್ಪತ್ರೆ ಆವರಣದಲ್ಲಿರುವ ಕೋವಿಡ್-19 ಆಸ್ಪತ್ರೆಗೆ ಭೇಟಿ ನೀಡಿ ಸುದ್ದಿಗಾರರೊಂದಿಗೆ ಮಾತನಾಡಿದರು. ಇದನ್ನೂ ಓದಿರಿ ಸಿಎಂ ಗೃಹ ಕಚೇರಿ ಕೃಷ್ಣಾದಲ್ಲೂ ಕರೊನಾ ಭೀತಿ!

ಕರೊನಾ ಮುಕ್ತ ಜಿಲ್ಲೆಯಾಗಿದ್ದ ಚಾಮರಾಜನಗರ ಮತ್ತೆ ಹಸಿರು ವಲಯವಾಗಿ ಮುಂದುವರಿಯಲಿದೆ. ಸೋಂಕಿತನಿಗೆ ಚಿಕಿತ್ಸೆ ನೀಡಿದ ವೈದ್ಯರು, ಆರೈಕೆ ಮಾಡಿದ ದಾದಿಯರಿಗೆ ಇದರ ಕ್ರೆಡಿಟ್ ಸಲ್ಲಬೇಕು ಎಂದರು.

ಸುಮಾರು ಹತ್ತು ದಿನಗಳ ಹಿಂದೆ ಮಹಾರಾಷ್ಟ್ರದಿಂದ ಚಾಮರಾಜನಗರಕ್ಕೆ ಸಂಬಂಧಿಕರ ಮನೆಗೆಂದು ಬಂದಿದ್ದ ವೈದ್ಯಕೀಯ ವಿದ್ಯಾರ್ಥಿಯೊಬ್ಬನಿಗೆ ಕರೊನಾ ಸೋಂಕು ದೃಢಪಟ್ಟಿತ್ತು. ಈ ಪ್ರಕರಣ ಪತ್ತೆಯಾಗುವವರೆಗೂ ಚಾಮರಾಜನಗರ ಜಿಲ್ಲೆ ಹಸಿರು ವಲಯವಾಗಿಯೇ ಗುರುತಿಸಿಕೊಂಡಿತ್ತು. ಈಗ ಸೋಂಕಿತನು ಗುಣಮುಖನಾಗಿದ್ದಾನೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net