ಹೊಸಕೋಟೆ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕೆ.ಸತೀಶ್ ಅವರಿಂದ ಬಿಎಸ್‌ವೈಗೆ ಶುಭಾಶಯ

yadiyurappa satish
Published on

ವಿಜಯವಾಣಿ ಸುದ್ದಿಜಾಲ ಬೆಂಗಳೂರು ಗ್ರಾಮಾಂತರ

ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಗುರುವಾರ ಹೊಸಕೋಟೆಯ ಬಿಜೆಪಿ ಮುಖಂಡರು ಹುಟ್ಟುಹಬ್ಬದ ಶುಭಕೋರಿದರು.

ನಗರದ ಡಾಲರ್ಸ್‌ ಕಾಲನಿಯಲ್ಲಿರುವ ಮನೆಗೆ ಭೇಟಿ ನೀಡಿದ ಹೊಸಕೋಟೆ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕೆ.ಸತೀಶ್ ಹಾಗೂ ಬಿಜೆಪಿ ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಂ.ರುದ್ರೇಶ್ ಅವರು ಯಡಿಯೂರಪ್ಪ ಅವರಿಗೆ ಶಾಲು ಹೊದಿಸಿ ಹೂಗುಚ್ಛ ನೀಡಿ ಶುಭಕೋರಿದರು. ಈ ವೇಳೆ ಮಾತನಾಡಿದ ಹೊಸಕೋಟೆ ಗ್ರಾಮಾಂತರ ಬಿಜೆಪಿ ಮಂಡಲ ಅಧ್ಯಕ್ಷ ಕೆ.ಸತೀಶ್ ಬಡವರ ಬಂಧು, ಬ್ರಷ್ಟಾಚಾರರಹಿತ ರಾಜಕಾರಣಿಯಾದ ಯಡಿಯೂರಪ್ಪ ಅವರಿಗೆ ಮತ್ತಷ್ಟು ಆರೋಗ್ಯ ಆಯುಸ್ಸನ್ನು ದೇವರು ಕರುಣಿಸಲು ಎಂದು ಪ್ರಾರ್ಥನೆ ಮಾಡುತ್ತೇವೆ. ರಾಜ್ಯದ ಎಲ್ಲ ಬಿಜೆಪಿ ಕಾರ್ಯಕರ್ತರ ಪರವಾಗಿ ಹುಟ್ಟುಹಬ್ಬದ ಶುಭಾಶಯ ಕೋರಿದ್ದೇವೆ ಎಂದು ತಿಳಿಸಿದರು. ದಕ್ಷಿಣ ಭಾರತದ ರಾಜ್ಯದಲ್ಲಿ ಮೊದಲ ಬಾರಿಗೆ ಬಿಜೆಪಿ ಖಾತೆ ತೆರೆದು ಸರ್ಕಾರ ರಚಿಸಿದ ಕೀರ್ತಿ ಯಡಿಯೂರಪ್ಪ ಅವರಿಗೆ ಸಲ್ಲುತ್ತದೆ. ರಾಜ್ಯ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರಿಗೆ ಬೆನ್ನುಲುಬಾಗಿ ಪಕ್ಷ ಸಂಘಟನೆಗೆ ಪ್ರಮುಖರಾಗಿರುವ ಯಡಿಯೂರಪ್ಪ ಅವರಿಗೆ ಪಕ್ಷದ ಪರವಾಗಿ ಇದೇ ಸಂದರ್ಭದಲ್ಲಿ ಧನ್ಯವಾದ ಅರ್ಪಿಸುತ್ತಿದ್ದೇವೆ ಎಂದು ಹೇಳಿದರು.

ಹೊಸಕೋಟೆಯಲ್ಲಿ ಅಭಿವೃದ್ಧಿ ಪರ್ವ:

ಈ ಹಿಂದೆ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಹೊಸಕೋಟೆ ತಾಲೂಕಿನ ಸಮಗ್ರ ಅಭಿವೃದ್ಧಿಗೆ ಒತ್ತು ನೀಡಿದ್ದರು. ಸಚಿವರಾಗಿದ್ದ ಎಂಟಿಬಿ ನಾಗರಾಜ್ ಅವರ ಅಭಿವೃದ್ಧಿ ಕಾರ್ಯಕ್ಕೆ ಕೈಜೋಡಿಸುವ ಮೂಲಕ ತಾಲೂಕಿನ ಜನರ ಆಶೋತ್ತರಗಳಿಗೆ ದನಿಯಾಗಿದ್ದರು. ರಾಜ್ಯ ಸೇರಿ ಗ್ರಾಮಾಂತರ ಜಿಲ್ಲೆಯಲ್ಲಿ ಬಿಜೆಪಿ ಸಂಘಟನೆಗೆ ಹೊಸ ಆಯಾಮ ನೀಡಿದ್ದರು, ಚುನಾವಣೆಗೂ ಮುನ್ನ ಹೊಸಕೋಟೆಗೆ ಆಗಮಿಸಿದ್ದ ಬಿಎಸ್‌ವೈ ಚುನಾವಣಾ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಗಳನ್ನು ಚಾಚೂ ತಪ್ಪದೆ ಪೂರೈಸಿದ್ದರು, ರಾಜಕೀಯ ಪಡಸಾಲೆಯಲ್ಲಿ ಮಾತುತಪ್ಪದ ಧೀಮಂತ ವ್ಯಕ್ತಿ ಎನಿಸಿದ್ದಾರೆ ಎಂದು ಕೆ.ಸತೀಶ್ ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net