

ಬೆಂಗಳೂರು: ಇಂದು (ಜೂ.15) ಸಂಜೆ 5.30ರ ಸುಮಾರಿಗೆ ಬೆಂಗಳೂರಿನ ನೃಪತುಂಗ ರಸ್ತೆಯಲ್ಲಿರುವ ಹೆಚ್ಚುವರಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಸಂಕೀರ್ಣದ ಎರಡನೇ ಮಹಡಿಯಲ್ಲಿರುವ ನ್ಯಾಯಾಲಯದ ಸಭಾಂಗಣದ ಹೊರಗೆ ಸುದ್ದಿ ವರದಿಗಾರರೊಬ್ಬರ ಮೇಲೆ ಹಲ್ಲೆ ನಡೆದಿರುವ ಘಟನೆ ಇದೀಗ ತಡವಾಗಿ ಬೆಳಕಿಗೆ ಬಂದಿದೆ.
ಚಿತ್ರದುರ್ಗದ ರೇಣುಕಸ್ವಾಮಿ ಕೊಲೆ ಪ್ರಕರಣ ಸಂಬಂಧ ಆರೋಪಿ ದರ್ಶನ್‌ರನ್ನು ಪೊಲೀಸರು ಕೋರ್ಟ್‌ಗೆ ಹಾಜರುಪಡಿಸುವ ವೇಳೆ ನಾಲ್ವರು ಅಪರಿಚಿತರು ವರದಿಗಾರರ ಮೇಲೆ ಹಲ್ಲೆ ಮಾಡಿದ್ದಲ್ಲದೇ ಅವರ ಬಳಿಯಿದ್ದ ಮೊಬೈಲ್ ಕಸಿದು ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ.