ಗೃಹಜ್ಯೋತಿ ಯೋಜನೆ; ಎರಡನೇ ದಿನಕ್ಕೆ ನೋಂದಣಿ ದುಪ್ಪಟ್ಟು

Gruha Jyoti
Published on

ಬೆಂಗಳೂರು: ರಾಜ್ಯ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಕಾಂಗ್ರೆಸ್​ ಪಕ್ಷ ಘೋಷಿಸಿದ್ದ ಐದು ಗ್ಯಾರಂಟಿಗಳ ಪೈಕಿ ಒಂದಾದ ಗೃಹಜ್ಯೋತಿ ಯೋಜನೆಯ ನೋಂದಣಿ ಕಾರ್ಯಕ್ಕೆ ಸರ್ಕಾರ ಜೂನ್​ 18ರಂದು ಅಧಿಕೃತವಾಗಿ ಚಾಲನೆ ನೀಡಿತ್ತು.

ಇದೀಗ ಗೃಹ ಜ್ಯೋತಿ ನೋಂದಣಿ ಕಾರ್ಯ ಎರಡನೇ ದಿನಕ್ಕೆ ಕಾಲಿಟ್ಟಿದ್ದು, ಈವೆರೆಗೆ 1,61,958 ಲಕ್ಷ ಗ್ರಾಹಕರು ಯೋಜನೆಗೆ ನೋಂದಣಿ ಮಾಡಿಕೊಂಡಿದ್ಧಾರೆ. ಮೊದಲ ದಿನ 55,000 ಗ್ರಾಹಕರು ನೋಂದಣಿ ಮಾಡಿಕೊಂಡಿದ್ದರು.

ಬೆಂಗಳೂರು ಓನ್​, ಗ್ರಾಮ ಓನ್​ ಹಾಗೂ ಕರ್ನಾಟಕ ಓನ್​ ಕಚೇರಿಗಳಲ್ಲಿ ನೋಂದಣಿ ಕಾರ್ಯ ನಿರಾತಂಕವಾಗಿ ನಡೆದಿದೆ. ಎರಡನೇ ದಿನದಂದು ಗ್ರಾಹಕರ ಸಂಖ್ಯೆ ದುಪ್ಪಟ್ಟುಗೊಂಡಿದ್ದು, ಸೋಮವಾರ 1,06,958 ಲಕ್ಷ ಮಂದಿ ಯೋಜನೆಗೆ ನೋಂದಾಯಿಸಿಕೊಂಡಿದ್ದಾರೆ.

ನೋಂದಣಿ ಪ್ರಕ್ರಿಯೆ ಸತ್ಯಂತ ಸರರಳವಾಗಿದ್ದು, ಗ್ರಾಹಕರು ಯಾವುದೇ ದಾಖಲೆಗಳನ್ನು ನೀಡಬೇಕಾಗಿಲ್ಲ. ವಿದ್ಯುತ್​ ಬಿಲ್ಲಿನಲ್ಲಿರುವ ಗ್ರಾಹಕರ ಸಂಖ್ಯೆ, ಆಧರದದ ಸಂಖ್ಯೆ, ದೂರವಾಣಿ ಸಂಖ್ಯೆಯನ್ನು ನಮೂದಿಸಬೇಕು. ನೋಂದಣಿ ಕಾರ್ಯವು ಬೆಂಗಳೂರು ಓವ್, ಗ್ರಾಮ ಓನ್​ ಹಾಗೂ ಕರ್ನಾಟಕ ಓನ್​ ಕಚೇರಿಗಳಲ್ಲಿ ಸೇವಾ ಸಿಂಧು ಪೋರ್ಟಲ್​ ಮೂಲಕ ಮಾಡಲಾಗುತ್ತಿದೆ.

ನೋಂದಣಿ ಕಾರ್ಯಕ್ಕೆ ಸರ್ಕಾರ ಯಾವುದೇ ಗಡುವು ನಿಗದಿಪಡಿಸಿಲ್ಲವಾದ್ದರಿಂದ ಜನರು ಆತಂಕ ಪಡುವ ಅಗತ್ಯವಿಲ್ಲ ಎಂದು ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net