ಆ.17ರ ನಂತರ ಗೃಹಲಕ್ಷ್ಮಿ ಯೋಜನೆ ಫಲಾನುಭವಿಗಳ ಖಾತೆಗೆ ಹಣ ಜಮೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್

Lakshmi Hebbalkar
ಸಾಂದರ್ಭಿಕ ಚಿತ್ರ
Published on

ಮೈಸೂರು: ಆಗಸ್ಟ್ 17ರ ನಂತರ ಗೃಹಲಕ್ಷ್ಮಿ ಯೋಜನೆ ಫಲನಾಭವಿಗಳ ಖಾತೆಗೆ ಹಣ ಜಮಾವಣೆಯಾಗುತ್ತದೆ. ಸದ್ಯ ಯೋಜನೆ ಅರ್ಜಿ ಸಲ್ಲಿಕೆಗೆ ಪ್ರತ್ಯೇಕ ಆ್ಯಪ್ ರೂಪಿಸಿದ್ದೇವೆ. ಜೂನ್ 27 ರಂದು ಸಚಿವ ಸಂಪುಟ ಸಭೆ ನಂತರ ಅರ್ಜಿ ಸಲ್ಲಿಸಬಹುದು. ಗೃಹಲಕ್ಷ್ಮಿ ಯೋಜನೆಯಲ್ಲಿ ಫಲಾನುಭವಿಗಳು ತಮ್ಮ ಆಧಾರ್ ಕಾರ್ಡ್ ಲಿಂಕ್ ಮಾಡಬೇಕಿರುವುದು ಕಡ್ಡಾಯವಾಗಿದ್ದು, ಅವರು ತೆರಿಗೆ ಪಾವತಿದಾರರು ಹೌದು/ಇಲ್ಲ ಎನ್ನುವುದು ಗೊತ್ತಾಗುತ್ತದೆ ಎಂದು ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ತಿಳಿಸಿದರು.

ಚಾಮುಂಡಿ ಬೆಟ್ಟದಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತಾ, ಗೃಹಲಕ್ಷ್ಮಿ ಯೋಜನೆ ಅರ್ಜಿ ಸಲ್ಲಿಕೆಗೆ ಕೊನೆಯ ದಿನಾಂಕ ಹಾಗೂ ಶುಲ್ಕ ಇರುವುದಿಲ್ಲ. ಮಧ್ಯವರ್ತಿಗಳ ಹಾವಳಿ ತಪ್ಪಿಸಲು ಆ್ಯಪ್ ರಚಿಸಿದ್ದೇವೆ. ಅರ್ಜಿ ಸಲ್ಲಿಸಿ ಸ್ಚೀಕೃತಿ ಪತ್ರ ಲಭಿಸುತ್ತಿದ್ದಂತೆ ಎಲ್ಲರೂ ಫಲಾನುಭವಿ ಪಟ್ಟಿಗೆ ಸೇರುತ್ತಾರೆ. ಇದರಲ್ಲಿ ಯಾವುದೇ ಗೊಂದಲ ಬೇಡ. ಗೃಹಲಕ್ಷ್ಮಿ ಯೋಜನೆ ಜಾರಿಗೆ ಹಣಕಾಸಿನ ತೊಂದರೆ ಇದೆ ಎಂಬುದರಲ್ಲಿ ಯಾವುದೇ ಅರ್ಥವಿಲ್ಲ. ಎಲ್ಲಾ ರೀತಿಯ ಸಂಪನ್ಮೂಲ ನಮ್ಮ ಬಳಿ ಇದೆ ಎಂದು ಸ್ಪಷ್ಟನೆ ನೀಡಿದರು.

ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದು ಸೆರೆಗೊಡ್ಡಿ ಬೇಡಿಕೊಂಡಿದ್ದೆ!

ರಾಜ್ಯದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಬೇಕೆಂದು ಚಾಮುಂಡೇಶ್ವರಿ ದೇವಿ ಮುಂದೆ ಸೆರಗೊಡ್ಡಿ ಬೇಡಿಕೊಂಡಿದ್ದೆ. ಈಗ ಅಧಿಕಾರಕ್ಕೆ ಬಂದಿದ್ದೇವೆ. ಹೀಗಾಗಿ ಚಾಮುಂಡಿ ಬೆಟ್ಟಕ್ಕೆ ಬಂದು ಹರಕೆ ತೀರಿಸಿದ್ದೇನೆ. ಎಲ್ಲೆಡೆ ಒಳ್ಳೆಯ ಮಳೆಯಾಗಲಿ ಎಂದು ಬೇಡಿಕೊಂಡಿರುವುದಾಗಿ ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net