

ಮೈಸೂರು: ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕರಾಗಿ ಸುರೇಶ್ ಬಾಬು ಅವರನ್ನು ನೇಮಕ ಮಾಡಿರುವ ಕುರಿತು ಶಾಸಕ ಜಿ.ಟಿ. ದೇವೇಗೌಡರಿಗೆ ಯಾವುದೇ ರೀತಿಯ ಅಸಮಾಧಾನ ಇಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದರು.
ಜಿ.ಟಿ. ದೇವೇಗೌಡರು ಬೇರೊಂದು ಕಾರ್ಯಕ್ರಮದಲ್ಲಿ ಪಾಲ್ಗೊಂಡ ಹಿನ್ನೆಲೆಯಲ್ಲಿ ಅವರು ಇಂದು ನನ್ನೊಂದಿಗೆ ಇಲ್ಲ. ಜಿಲ್ಲೆಯ ಉಳಿದೆಲ್ಲ ಜೆಡಿಎಸ್ ನಾಯಕರು ಹಾಗೂ ಜಿ.ಟಿ. ದೇವೇಗೌಡ ಅವರ ಪುತ್ರ ಜಿ.ಡಿ. ಹರೀಶ್ ಗೌಡ ನನ್ನೊಂದಿಗೆ ಇದ್ದಾರೆ. ಜಿ.ಟಿ. ದೇವೇಗೌಡರು ನಮ್ಮ ಕುಟುಂಬದವರು, ಅವರ ಬಗ್ಗೆ ಏತಕ್ಕೆ ಅನುಮಾನ ಪಡುತ್ತೀರಿ ಎಂದು ಮಾಧ್ಯಮದವರನ್ನು ಪ್ರಶ್ನಿಸಿದರು. ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಗೆ ಎನ್‌ಡಿಎ ಅಭ್ಯರ್ಥಿಯನ್ನು ಕಣಕ್ಕಿಳಿಸಲಾಗುವುದು ಎಂದು ಭಾನುವಾರ ಸುದ್ದಿಗೋಷ್ಠಿಯಲ್ಲಿ ಪ್ರಶ್ನೆಯೊಂದಕ್ಕೆ ಉತ್ತರಿಸಿದರು.