ನಗರದ ಜಿಪಂನ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನ ಸಭೆಯಲ್ಲಿ ಜಿಲ್ಲಾ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರಡ್ಡಿ ಶ್ರೀನಿವಾಸ ಅವರು ಮಾತನಾಡಿದರು. ಜಿಪಂ ಸಿಇಒ ವರ್ಣಿತ್ ನೇಗಿ, ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಮಂಜುನಾಥ ಗೋಂಡಬಾಳ, ಕಾಸಿಮ್ ಸಾಬ್, ಅಮರೇಶಪ್ಪ ಎಸ್.ಜಿ. ಇತರರಿದ್ದರು.
Published on:
Copied
Follow Us
ಪ್ರಮುಖ ಮುಖ್ಯಾಂಶಗಳು
ಗ್ಯಾರಂಟಿ ಜಿಲ್ಲಾಧ್ಯಕ್ಷ ರೆಡ್ಡಿ ಶ್ರೀನಿವಾಸ ಸೂಚನೆ
ಗ್ಯಾರಂಟಿ ಪ್ರಗತಿ ಪರಿಶೀಲನಾ ಸಭೆ
ಕೊಪ್ಪಳ : ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳ ಉತ್ಸವವನ್ನು ಕೊಪ್ಪಳದಲ್ಲಿ ಫೆಬ್ರವರಿ ಮಾಹೆಯಲ್ಲಿ ಹಮ್ಮಿಕೊಳ್ಳಲಾಗುವುದು ಎಂದು ಜಿಲ್ಲಾ ಗ್ರಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ರೆಡ್ಡಿ ಶ್ರೀನಿವಾಸ ಹೇಳಿದರು.
ನಗರದ ಜಿಪಂ ಜೆ.ಎಚ್.ಪಟೇಲ್ ಸಭಾಂಗಣದಲ್ಲಿ ಗುರುವಾರ ಗ್ಯಾರಂಟಿ ಯೋಜನೆಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದರು.
ಜಿಲ್ಲಾ ಮಟ್ಟದ ಗ್ಯಾರಂಟಿ ಉತ್ಸವವನ್ನು ನಗರದ ಮಧುಶ್ರೀ ಗಾರ್ಡನ್ನಲ್ಲಿ ಆಯೋಜಿಸಲು ಉದ್ದೇಶಿಸಲಾಗಿದೆ. ಈ ಕಾರ್ಯಕ್ರಮದಲ್ಲಿ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳಿಗೆ ಸನ್ಮಾನಿಸಲಾಗುವುದು. ಈ ಕಾರ್ಯಕ್ರಮವನ್ನು ಅಚ್ಚುಕಟ್ಟಾಗಿ ಹಮ್ಮಿಕೊಳ್ಳಲು ಐದು ಗ್ಯಾರಂಟಿ ಯೋಜನೆಗಳಿಗೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ವಿಶೇಷ ಕ್ರಮ ವಹಿಸಬೇಕು ಎಂದರು.
ಉತ್ಸವಕ್ಕಾಗಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಎಲ್ಲಾ ತಾಲೂಕು ಅಧ್ಯಕ್ಷರು, ಸದಸ್ಯರು ಹೆಚ್ಚಿನ ಜವಾಬ್ದಾರಿ ತೆಗೆದುಕೊಂಡು ಕಾರ್ಯಕ್ರಮವನ್ನು ಯಾಶಸ್ವಿಗೊಳಿಸಬೇಕು. ಈ ಯೋಜನೆಗಳು ಬಡ ಕುಟುಂಬಗಳನ್ನು ಆರ್ಥಿಕವಾಗಿ ಸ್ಥಿರಗೊಳಿಸವಲ್ಲಿ ಮಹತ್ವದ ಪಾತ್ರ ವಹಿಸುತ್ತಿವೆ. ಈ ಕಾರ್ಯಕ್ರಮದಲ್ಲಿ ಸಾರ್ವಜನಿಕರಿಗೆ ವಿವರವಾದ ಮಾಹಿತಿ ನೀಡಲಾಗುತ್ತದೆ ಎಂದು ಹೇಳಿದರು.
ಜಿಪಂ ಸಿಇಒ ವರ್ಣಿತ್ ನೇಗಿ ಮಾತನಾಡಿ, ಯುವನಿಧಿ ಯೋಜನೆ ಫಲಾನುಭವಿಗಳಿಗೆ ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ವಿವಿಧ ಕೌಶಲ್ಯ ತರಬೇತಿಯನ್ನು ನೀಡಲಾಗುತ್ತಿದೆ. ಇದರಿಂದ ಅವರಿಗೆ ಮುಂದಿನ ದಿನಗಳಲ್ಲಿ ಉದ್ಯೋಗಕ್ಕಾಗಿ ಅನುಕೂಲವಾಗುತ್ತದೆ. ಯುವನಿಧಿ ಪ್ಲಸ್ ಕಾರ್ಯಕ್ರಮದಡಿ ತರಬೇತಿ ಪಡೆಯುವವರಿಗೆ ಯುವನಿಧಿ ಯೋಜನೆಯ ನಿರುದ್ಯೋಗ ಭತ್ಯೆ ಕಡಿತವಾಗುವುದಿಲ್ಲ. ಈ ಬಗ್ಗೆ ಎಲ್ಲರಿಗೂ ಸೂಕ್ತ ಮಾಹಿತಿ ನೀಡಬೇಕು ಎಂದು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಜಿಲ್ಲಾ ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷ ಮಂಜುನಾಥ ಜಿ. ಗೊಂಡಬಾಳ ಮಾತನಾಡಿ, ಗ್ಯಾರಂಟಿ ಉತ್ಸವದಲ್ಲಿ ಫಲಾನುಭವಿಗಳಿಗೆ ಬೇಕಿರುವ ಅಗತ್ಯ ಮಾಹಿತಿ ಮತ್ತು ಜಿಲ್ಲೆಯಲ್ಲಿ ಇದುವರೆಗೂ ಕೊಟ್ಟಿರುವ ಯೋಜನೆಗಳ ಮಾಹಿತಿಯನ್ನು ಪ್ಲೆಕ್ಸ್ ಮೂಲಕ ಅಳವಡಿಸಬೇಕು. ವಯಸ್ಸಾದ ಫಲಾನುಭವಿಗಳಿಗೆ ಅನ್ನಭಾಗ್ಯ ಯೋಜನೆಯ ಸುವಿಧ ಕುರಿತು ಹೆಚ್ಚಿನ ಪ್ರಚಾರ ಮತ್ತು ನಾಯಬೆಲೆ ಅಂಗಡಿ ಮಾಲೀಕರಿಗೆ ಸೂಚನೆ ಕೊಡುವಂತೆ ಆಹಾರ ಇಲಾಖೆಯ ಅಧಿಕಾರಿಗಳು ಅಗತ್ಯಕ್ರಮ ಕೈಗೊಳ್ಳಬೇಕು ಎಂದರು.
ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಉಪಾಧ್ಯಕ್ಷರಾದ ಕಾಸಿಮ್ ಸಾಬ್, ಅಮರೇಶಪ್ಪ ಎಸ್.ಜಿ., ಸದಸ್ಯರು, ಹಾಗೂ ಗ್ಯಾರಂಟಿ ಯೋಜನೆ ಅನುಷ್ಠಾನ ಇಲಾಖೆಗಳ ಅಧಿಕಾರಿಗಳು ಮತ್ತು ಇತರರಿದ್ದರು.