

ಹಾವೇರಿ: ಸರ್ಕಾರ ಬಡವರಿಗಾಗಿ ಜಾರಿಗೆ ತಂದಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಅರ್ಹ ಲಾನುಭವಿಗಳಿಗೆ ತಲುಪಿಸಲು ಮತ್ತು ಮೇಲ್ವಿಚಾರಣೆ ಮಾಡಲು ಜಿಲ್ಲಾ ಮಟ್ಟದಲ್ಲಿ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾ-ಧಿಕಾರ ಸಮಿತಿ ರಚಿಸಲಾಗಿದೆ ಎಂದು ವಿಧಾನಸಭೆ ಉಪ ಸಭಾಧ್ಯ ರುದ್ರಪ್ಪ ಲಮಾಣಿ ಹೇಳಿದರು.
ಜಿಪಂ ಸಭಾಭಾವನದಲ್ಲಿ ಸೋಮವಾರ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾ-ಧಿಕಾರ ಸಮಿತಿ ಉದ್ಘಾಟಿಸಿ ಮಾತನಾಡಿದ ಅವರು, ಈಗಾಗಲೇ ರಾಜ್ಯ ಮಟ್ಟದಲ್ಲಿ ಸಮಿತಿ ರಚಿಸಲಾಗಿದೆ. ಹಾಗೆಯೇ ರಾಜ್ಯದ ಪ್ರತಿ ಜಿಲ್ಲೆಯಲ್ಲೂ ಕೂಡ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಚಿಸುವ ಮೂಲಕ ಬಡವರ ಕಲ್ಯಾಣ ಕೈಕೊಳ್ಳಲಾಗುವುದು ಎಂದರು.
ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾ-ಧಿಕಾರದ ರಾಜ್ಯ ಉಪಾಧ್ಯ ಎಸ್.ಆರ್. ಪಾಟೀಲ ಮಾತನಾಡಿ, ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳ ಜಾರಿಯಿಂದ ಹೊಸ ಕ್ರಾಂತಿ ಪ್ರಾರಂಭವಾಗಿದೆ. ಬೇರೆ ಬೇರೆ ರಾಜ್ಯದವರು ಕೂಡ ಇಂದು ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳನ್ನು ಅಳವಡಿಸಿಕೊಳ್ಳುತ್ತಿವೆ. ಇದು ರಾಜ್ಯದಲ್ಲಿ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳ ಉಪಯುಕ್ತತೆ ಮತ್ತು ಮಹತ್ವವನ್ನು ತಿಳಿಸುತ್ತಿದೆ ಎಂದರು.
ಈಗಾಗಲೇ ಸರ್ಕಾರ ಜಿಲ್ಲೆಗೆ 1300 ಕೋಟಿ ರೂ. ಅನುದಾನವನ್ನು ವಿವಿಧ ಗ್ಯಾರಂಟಿ ಯೋಜನೆಗಳಿಗೆ ಹಂಚಿಕೆಮಾಡಿದೆ. ಇದು ಜಿಲ್ಲೆಯ ಜನರ ಆಥಿರ್ಕ, ಸಾಮಾಜಿಕ ಹಾಗೂ ಶೈಣಿಕವಾಗಿ ಮೇಲೇತ್ತಲು ಸಹಕಾರಿಯಾಗಿವೆ ಎಂದರು.
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ, ಅನೇಕ ಟೀಕೆ ಟಿಪ್ಪಣಿಗಳ ನಡುವೆ ರಾಜ್ಯ ಸರ್ಕಾರ ಈ ಐದು ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಯಿತು. ಇಂದು ಈ ಯೋಜನೆಗಳು ಜನರಿಗೆ ಆಥಿರ್ಕ ಶಕ್ತಿಯನ್ನು ತುಂಬಿವೆ ಎಂದರು.
ಶಾಸಕ ಬಸವರಾಜ ಶಿವಣ್ಣನವರ, ಪ್ರಾಧಿ-ಕಾರದ ಜಿಲ್ಲಾಧ್ಯ ಎಂ.ಎಂ. ಹಿರೇಮಠ, ನಗರಾಭಿವೃದ್ಧಿ ಪ್ರಾಧಿ-ಕಾರದ ಅಧ್ಯ ಎಸ್.ಎ್.ಎನ್. ಗಾಜಿಗೌಡ್ರ, ಜಿಪಂ ಸಿಇಒ ಅಯ ಶ್ರೀಧರ, ದೇವಗಿರಿ ಗ್ರಾಪಂ ಅಧ್ಯ ಪ್ರಭಾಕರ ಪಾರಿಗಂಟಿ, ಜಿಲ್ಲಾ ಮಟ್ಟದ ಅ-ಕಾರಿಗಳು ಹಾಗೂ ಇತರರು ಉಪಸ್ಥಿತರಿದ್ದರು.