ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಸಭೆ : ಅನುದಾನ, ಫಲಾನುಭವಿಗಳ ಸಂಖ್ಯೆ ಪರಿಶೀಲನೆ : ಅಧಿಕಾರಿಗಳಿಂದ ಮಾಹಿತಿ

14
Published on

 ವಿಜಯವಾಣಿ ಸುದ್ದಿಜಾಲ ಬೆಳ್ತಂಗಡಿ

ಬೆಳ್ತಂಗಡಿ ತಾಲೂಕುಮಟ್ಟದ ಅನುಷ್ಠಾನ ಸಮಿತಿ ಸಭೆ ಸಮಿತಿ ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆಯಲ್ಲಿ ಪಂಚ ಗ್ಯಾರಂಟಿ ಯೋಜನೆ ಸದಸ್ಯ ಕಾರ್ಯದರ್ಶಿ ಹಾಗೂ ಕಾರ್ಯನಿರ್ವಹಣಾಧಿಕಾರಿ ಭವಾನಿಶಂಕರ್ ಎನ್. ಉಪಸ್ಥಿತಿಯಲ್ಲಿ ಬೆಳ್ತಂಗಡಿ ತಾಪಂ ಸಮಿತಿ ಕಚೇರಿಯಲ್ಲಿ ನಡೆಯಿತು.

ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಆಹಾರ ಇಲಾಖೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಮತ್ತು ಉದ್ಯೋಗ ವಿನಿಮಯ ಕಚೇರಿಗಳ ಮೂಲಕ ಗೃಹಜ್ಯೋತಿ, ಗೃಹಲಕ್ಷ್ಮೀ, ಅನ್ನಭಾಗ್ಯ, ಶಕ್ತಿ ಹಾಗೂ ಯುವನಿಧಿ ಯೋಜನೆಗಳಲ್ಲಿ ಸರ್ಕಾರದಿಂದ ಬಿಡುಗಡೆಯಾದ ಅನುದಾನ ಮತ್ತು ಸವಲತ್ತು ಪಡೆದ ಫಲಾನುಭವಿಗಳ ಸಂಖ್ಯೆ ಪರಿಶೀಲಿಸಲಾಯಿತು.

ಸರ್ಕಾರದ ಪಂಚಯೋಜನೆಗಳ ಸವಲತ್ತುಗಳನ್ನು ಪಡೆಯಲು ಬಾಕಿ ಇರುವ ಫಲಾನುಭವಿಗಳ ಅರ್ಜಿಗಳನ್ನು ವಿಲೇವಾರಿಗೊಳಿಸುವ ಕುರಿತು ಚರ್ಚಿಸಲಾಯಿತು.

ಗೃಹಲಕ್ಷ್ಮೀ ಯೋಜನೆಯಡಿ ಪ್ರಕೃತ 58,798 ಫಲಾನುಭವಿಗಳಿದ್ದು, 2023ರ ಆಗಸ್ಟ್‌ನಿಂದ ಈವರೆಗೆ 2,36,88,22,00 ರೂ. ಸಹಾಯಧನ ದೊರಕಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದರು.

ಗ್ಯಾರಂಟಿ ಯೋಜನೆಗಳ ಜಿಲ್ಲಾ ಸಮಿತಿ ಸದಸ್ಯರಾದ ಶೇಖರ್ ಕುಕ್ಕೇಡಿ, ತಾಲೂಕು ಅನುಷ್ಠಾನ ಸಮಿತಿ ಸದಸ್ಯರಾದ ವಂದನಾಕುಮಾರಿ, ಸೌಮ್ಯಾ ಲಾಯಿಲ, ಮೆರಿಟಾ ಪಿಂಟೋ, ವಾಸುದೇವ ರಾವ್, ವಿಜಯಗೌಡ ಬೆಳಾಲು, ಕೇಶವ ನಾಯ್ಕ, ಶರೀಫ್ ಸಬರಬೈಲ್, ಕೆ.ನೇಮಿರಾಜ್ ಕಿಲ್ಲೂರು, ವೀರಪ್ಪ ಮೊಯ್ಲಿ ಹಾಗೂ ನೋಡಲ್ ಅಧಿಕಾರಿ ಹೆರಾಲ್ಡ್ ಸ್ವಿಕ್ವೇರಾ ಉಪಸ್ಥಿತರಿದ್ದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net