ಗ್ಯಾರಂಟಿ ಯೋಜನೆಗಳ ಅಹವಾಲು ಸ್ವೀಕಾರ ಸಭೆ ನಾಳೆ

Published on

ಮದ್ದೂರು: ತಾಲೂಕಿನ ಬೆಸಗರಹಳ್ಳಿ ಗ್ರಾಮದ ಶ್ರೀ ಯಲ್ಲಮ್ಮತಾಯಿ ದೇವಾಲಯದ ಸಮುದಾಯ ಭವನದಲ್ಲಿ ಹೋಬಳಿ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಕುಂದು-ಕೊರತೆಗಳ ಸಭೆಯನ್ನು ಆ.12 ರಂದು ಬೆಳಗ್ಗೆ 11 ಗಂಟೆಗೆ ಹಮ್ಮಿಕೊಳ್ಳಲಾಗಿದೆ ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಬಿ.ಬಸವರಾಜು ತಿಳಿಸಿದ್ದಾರೆ.

ತಾಲೂಕಿನ ಸಾರ್ವಜನಿಕರು ಹಾಗೂ ಫಲಾನುಭವಿಗಳು ತಮ್ಮ-ತಮ್ಮ ಸಮಸ್ಯೆಗಳ ಕುರಿತು ಅಹವಾಲುಗಳನ್ನು ನೀಡಬಹುದು. ಗ್ಯಾರಂಟಿ ಯೋಜನೆಗಳ ಅನುಷ್ಠಾನದ ಕುರಿತು ಮಾಹಿತಿ ಪಡೆಯಬಹುದು ಹಾಗೂ ಪರಿಹಾರ ಕಂಡುಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರು, ತಾಪಂ ಕಾರ್ಯನಿರ್ವಾಹಕ ಅಧಿಕಾರಿ, ಐದು ಗ್ಯಾರಂಟಿ ಯೋಜನೆಗಳ ಸಂಬಂಧಪಟ್ಟ ಸರ್ಕಾರಿ ಅಧಿಕಾರಿಗಳು ಹಾಗೂ ಸಿಬ್ಬಂದಿ ಎಲ್ಲರೂ ಹಾಜರಾಗಿ, ಯೋಜನೆಗಳ ಸುಧಾರಣೆಗಾಗಿ ನಿಮ್ಮ ಅಭಿಪ್ರಾಯ ಮತ್ತು ಅಹವಾಲುಗಳನ್ನು ಹಂಚಿಕೊಳ್ಳಬಹುದಾಗಿದೆ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net