ಗ್ಯಾರಂಟಿ ಯೋಜನೆಗಳು ಜನರನ್ನು ಭಿಕ್ಷೆ ಎತ್ತುವಂತೆ ಮಾಡಲಿವೆ: ಡಾ. ಸುಬ್ರಮಣಿಯನ್ ಸ್ವಾಮಿ

subramanya swamy
subramanya swamy
Published on

ಬೆಂಗಳೂರು ಗ್ಯಾರಂಟಿ ಯೋಜನೆಗಳು ಜನರನ್ನು ಭಿಕ್ಷೆ ಎತ್ತುವಂತೆ ಮಾಡಲಿವೆ. ಅದರ ಬದಲಾಗಿ ರಸ್ತೆ ಸೇರಿ ವಿವಿಧ ಮೂಲ ಸೌಕರ್ಯ ಹೆಚ್ಚಳ, ಉದ್ಯೋಗ ಸೃಷ್ಟಿಗೆ ಸರ್ಕಾರವು ಆದ್ಯತೆ ನೀಡುವುದು ಉತ್ತಮ ಎಂದು ಬಿಜೆಪಿ ನಾಯಕ. ಅರ್ಥಶಾಸ್ತ್ರಜ್ಞ ಡಾ. ಸುಬ್ರಮಣಿಯನ್ ಸ್ವಾಮಿ ಅಭಿಪ್ರಾಯ ವ್ಯಕ್ತಪಡಿಸಿದರು.

ನಗರದಲ್ಲಿ ಭಾನುವಾರ ‘ಗ್ಯಾರಂಟಿ ಯೋಜನೆಗಳು ಆರ್ಥಿಕತೆ ಮತ್ತು ಸಾಮಾಜಿಕವಾಗಿ ಹೇಗೆ ಪ್ರಭಾವ ಬೀರಲಿವೆ’ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು, ಪರೋಕ್ಷ ತೆರಿಗೆಗಳನ್ನು ಕಡಿಮೆ ಮಾಡುವ ಮೂಲಕ ಜನರ ಜೀವನವನ್ನು ಉತ್ತಮಗೊಳಿಸಬಹುದು. ಆದರೆ, ಸರ್ಕಾರಗಳು ಅದನ್ನು ಮಾಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದರು.

ಕರ್ನಾಟಕದ ಕೊಡಗು ಸೇರಿ ಹಲವೆಡೆ ರಸ್ತೆಗಳು ಹಾಳಾಗಿವೆ. ಅದೇ ರೀತಿ ತಮಿಳುನಾಡು, ಆಂಧ್ರ ಪ್ರದೇಶ, ಮಹಾರಾಷ್ಟ್ರ ಸೇರಿ ಎಲ್ಲ ಕಡೆ ಕಳಪೆ ರಸ್ತೆಗಳಿವೆ. ಉತ್ತಮ ರಸ್ತೆಗಳನ್ನು ಅಭಿವೃದ್ಧಿಪಡಿಸಲು ಬಡ ಜನರು ಕೆಲಸ ಮಾಡುತ್ತಿದ್ದಾರೆ. ಇಂತಹ ಜನರಿಗೆ ಕೂಲಿ ನೀಡುವುದರಿಂದ ಸುಲಭವಾಗಿ ಉದ್ಯೋಗ ಅವಕಾಶಗಳನ್ನು ಸೃಷ್ಟಿಸಬಹುದು. ಇನ್ನು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳಲ್ಲಿ ಕೆಲಸ ನೀಡಬಹುದಾಗಿದೆ ಎಂದರು.

ಕೇಂದ್ರ ಸರ್ಕಾರದ ಅನುಮತಿ ಪಡೆದು ಸಬ್ಸಿಡಿ ರೂಪದಲ್ಲಿ ಮೂಲ ಸೌಕರ್ಯ ಕ್ಷೇತ್ರವನ್ನು ಉತ್ತಮ ಪಡಿಸಬಹುದಾಗಿದೆ ಎಂದು ಹೇಳಿದರು.

ಇದನ್ನು ಇತರೆ ರಾಜ್ಯಗಳಲ್ಲಿಯೂ ವಿಸ್ತರಿಸುವುದು ಮೂರ್ಖತನವಾಗಿದೆ. ಬಿಜೆಪಿ ಕೂಡ ಮಧ್ಯಪ್ರದೇಶದಲ್ಲಿ ಗ್ಯಾರಂಟಿ ೋಷಿಸಿರುವುದು ಮೂರ್ಖತನವಾಗಿದೆ ಎಂದು ಟೀಕಿಸಿದರು.

ತಮಿಳುನಾಡು ಮತ್ತು ಮಹಾರಾಷ್ಟ್ರಗಳಲ್ಲಿ ದೇವಸ್ಥಾನಗಳನ್ನು ಸರ್ಕಾರದ ವಶಕ್ಕೆ ಪಡೆಯುತ್ತಿರುವುದು ಕೂಡ ಸರಿಯಾದ ತೀರ್ಮಾನಗಳಲ್ಲ ಎಂದು ಹೇಳಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net