ಮಲಗಿದ್ದ ಸೆಕ್ಯೂರಿಟಿ ಗಾರ್ಡ್​ಗೆ ಮನಃಬಂದಂತೆ ಥಳಿಸಿದ ಯುವಕರು

beating
Published on

ನೊಯ್ಡಾ: ರೆಸಿಡೆನ್ಶಿಯಲ್ ಸೊಸೈಟಿಯೊಂದರ ಪಾರ್ಕಿಂಗ್ ಸಮಸ್ಯೆಗೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳು ಸೆಕ್ಯುರಿಟಿ ಗಾರ್ಡ್‌ಗೆ ಮನಃಬಂದಂತೆ ಥಳಿಸಿರುವ ಘಟನೆ ಉತ್ತರ ಪ್ರದೇಶದ ನೊಯ್ಡಾದಲ್ಲಿ ಇಂದು ನಡೆದಿದೆ. ಈ ಘಟನೆ ಸಿಸಿಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ.

ಆರೋಪಿಗಳು ಮತ್ತು ಅದೇ ಸೊಸೈಟಿಯಲ್ಲಿ ವಾಸಿಸುವ ಮಹಿಳೆಯ ನಡುವೆ ವಾಹನ ನಿಲುಗಡೆಗೆ ಸಂಬಂಧಿಸಿದಂತೆ ಕಲಹ ಉಂಟಾಗಿದ್ದು, ನಂತರದಲ್ಲಿ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಆರೋಪಿಗಳ ಕೃತ್ಯ ಕ್ಯಾಮೆರಾದಲ್ಲಿ ಸೆರೆಯಾಗಿದ್ದು, ಗಾರ್ಡ್ ತನ್ನ ಕ್ಯಾಬಿನ್‌ನಲ್ಲಿ ಮಲಗಿದ್ದಾಗ ಇಬ್ಬರು ವ್ಯಕ್ತಿಗಳು ಪ್ರವೇಶಿಸಿ ಕ್ರೂರವಾಗಿ ಹಲ್ಲೆ ನಡೆಸಲು ಪ್ರಯತ್ನಿಸಿದಾಗ ಆತ ನ್ನನ್ನು ತಾನು ರಕ್ಷಿಸಿಕೊಳ್ಳುಲು ಯತ್ನಿಸಿರುವುದನ್ನು ಕಾಣಬಹುದಾಗಿದೆ. ಘಟನೆಯ ಬಗ್ಗೆ ನೊಯ್ಡಾ ಪೊಲೀಸರು ಪ್ರತಿಕ್ರಿಯೆ ನೀಡಿದ್ದು, ದಾಳಿಕೋರರಲ್ಲಿ ಒಬ್ಬನನ್ನು ಬಂಧಿಸಲಾಗಿದ್ದು ಘಟನೆಯಲ್ಲಿ ಭಾಗಿಯಾಗಿರುವವರ ವಿರುದ್ಧ ಅಗತ್ಯ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.(ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net