

ಬೆಂಗಳೂರು: ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಮಹಿಳೆಯರ ಉಚಿತ ಪ್ರಯಾಣ ಶಕ್ತಿ ಯೋಜನೆಗೆ ಈಗಾಗಲೇ ಅಧಿಕೃತ ಆದೇಶ ಹೊರಬಿದ್ದಿದೆ. ಮಹಿಳೆಯರ ಜತೆಗೆ ತೃತೀಯ ಲಿಂಗಿಗಳಿಗೂ ಉಚಿತ ಪ್ರಯಾಣಕ್ಕೆ ಅವಕಾಶ ಕಲ್ಪಿಸಲಾಗಿದೆ. ಇದೀಗ 'ಶಕ್ತಿ ಯೋಜನೆಯ' ಮಾರ್ಗಸೂಚಿ ಬಿಡುಗಡೆ ಮಾಡಲಾಗಿದೆ.
ಮುಂದಿನ ಮೂರು ತಿಂಗಳೊಳಗೆ ಉಚಿತ ಸೌಲಭ್ಯ ಪಡೆಯುವ ಎಲ್ಲಾ ಮಹಿಳೆಯರಿಗೆ ಸರ್ಕಾರದಿಂದ ಶಕ್ತಿ ಸ್ಮಾರ್ಟ್ ಕಾರ್ಡ್ ವಿತರಿಸಲಾಗುತ್ತದೆ. ಈ ಕಾರ್ಡ್ ಹೊಂದಿದ್ದರೆ ಮಾತ್ರ ಉಚಿತವಾಗಿ ಸರ್ಕಾರಿ ಬಸ್ನಲ್ಲಿ ಮಹಿಳೆಯರು ಪ್ರಯಾಣಸಬಹುದಾಗಿದೆ.
ಶಕ್ತಿ ಸ್ಮಾರ್ಟ್ ಕಾರ್ಡ್ ಹೊಂದಿರುವ ರಾಜ್ಯದ ಎಲ್ಲಾ ಮಹಿಳೆಯರು ನಗರ, ಸಾಮಾನ್ಯ ಮತ್ತು ವೇಗದೂತ ಸಾರಿಗೆಗಳಲ್ಲಿ (ಎ.ಸಿ ಬಸ್ ಮತ್ತು ಐಷಾರಾಮಿ ಬಸ್ಗಳನ್ನು ಹೊರತುಪಡಿಸಿ) ಉಚಿತವಾಗಿ ಪ್ರಯಾಣಿಸಲು ಅವಕಾಶ ನೀಡಿ, ಆದೇಶ ಹೊರಡಿಸಲಾಗಿದೆ.
ಸೇವಾ ಸಿಂಧು ಪೋರ್ಟಲ್ ಮೂಲಕ ಅರ್ಜಿಗಳನ್ನು ಪಡೆದು ಸಾರ್ವಜನಿಕರು ಸಂಬಂಧಪಟ್ಟ ಸಾರಿಗೆ ಇಲಾಖೆಗೆ ಸಲ್ಲಿಸಬೇಕು. ಅಂತೆಯೇ ನಿಗಮಗಳು ಶಕ್ತಿ ಸ್ಮಾರ್ಟ್ ಕಾರ್ಡ್ಗಳನ್ನು ವಿತರಿಸುವ ಪ್ರಕ್ರಿಯೆಯನ್ನು ಮುಂದಿನ ಮೂರು ತಿಂಗಳೊಳಗಾಗಿ ಪೂರ್ಣಗೊಳಿಸಬೇಕು ಎಂದು ಸರ್ಕಾರವು ಆದೇಶದಲ್ಲಿ ಸಾರಿಗೆ ನಿಗಮಗಳಿಗೆ ಸೂಚಿಸಿದೆ.