ಭೀಕರ ರಸ್ತೆ ಅಪಘಾತಕ್ಕೆ ಚೆಲ್ಲಿಹೋಯ್ತು ಪ್ರಾಣ: 10 ಮಂದಿಯ ದಾರುಣ ಸಾವು!

car accident
Published on

ವಡೋದರಾ: ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯ ನಾಡಿಯಾಡ್ ಬಳಿ ನಡೆದ ಭೀಕರ ಅಪಘಾತವಾಗಿದ್ದು 10 ಜನರು ಸ್ಥಳದಲ್ಲೇ ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ವಡೋದರಾದಿಂದ ಅಹಮದಾಬಾದ್‌ಗೆ ತೆರಳುತ್ತಿದ್ದ ಕಾರು ಮುಂದೆ ಹೋಗುತ್ತಿದ್ದ ಕಾರು ಟ್ರೇಲರ್‌ ಟ್ರಕ್ ನಡುವೆ ಭೀಕರ ಅಪಘಾತವಾಗಿದೆ. ಅಪಘಾತದಲ್ಲಿ ಎಂಟು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನಿಬ್ಬರು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಭೀಕರ ಅಪಘಾತ ಸುದ್ದಿ ತಿಳಿಯುತ್ತಿದ್ದಂತೆ ಎರಡು ಆಂಬ್ಯುಲೆನ್ಸ್​ಗಳು ಸ್ಥಳಕ್ಕೆ ಧಾವಿಸಿ ಮೃತದೇಹಗಳನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಸಾವಿನ ಸಂಖ್ಯೆ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

ಸ್ಥಳಕ್ಕೆ ಪೊಲೀಸ್ ತಂಡ ಸ್ಥಳಕ್ಕೆ ಆಗಮಿಸಿದೆ. ಅಪಘಾತದಿಂದ ಅಹಮದಾಬಾದ್-ವಡೋದರಾ ಎಕ್ಸ್‌ಪ್ರೆಸ್ ಹೆದ್ದಾರಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿದೆ. ಈ ಭೀಕರ ಅಪಘಾತ ದೃಶ್ಯಗಳು ಸಮಾಜಿಕ ಮಾಧ್ಯಮಗಲ್ಲಿ ಹರಿದಾಡುತ್ತಿವೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net