

ನವದೆಹಲಿ: ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಮ್ಯಾಜಿಕ್ ನಂಬರ್ ದಾಟಿರುವ ಬಿಜೆಪಿ ಭರ್ಜರಿ ಗೆಲುವಿನತ್ತ ಮುನ್ನುಗ್ಗುತ್ತಿದೆ. ಘಟ್ಲೋಡಿಯಾ ಕ್ಷೇತ್ರದಲ್ಲಿ ಸಿಎಂ ಭೂಪೇಂದ್ರ ಪಟೇಲ್ ಗೆಲುವು ಸಾಧಿಸಿದ್ದಾರೆ.
ಡಿ.1 ಮತ್ತು 5ರಂದು ಗುಜರಾತ್ನ 182 ವಿಧಾನಸಭಾ ಸೀಟುಗಳಿಗೆ ಎರಡು ಹಂತಗಳಲ್ಲಿ ಮತದಾನ ನಡೆದಿತ್ತು. 7ನೇ ಬಾರಿಗೆ ರಾಜ್ಯದಲ್ಲಿ ಅಧಿಕಾರದ ಗದ್ದುಗೆ ಏರುವ ವಿಶ್ವಾಸದಲ್ಲಿ ಬಿಜೆಪಿಯಿದೆ. ಮತದಾನೋತ್ತರ ಸಮೀಕ್ಷೆಗಳೂ ಬಿಜೆಪಿ ಗೆಲ್ಲಲಿದೆ ಎಂದು ಭವಿಷ್ಯ ನುಡಿದಿದ್ದವು. ಪ್ರಧಾನಿ ನರೇಂದ್ರ ಮೋದಿ ತವರು ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಇದೇ ಮೊದಲ ಬಾರಿಗೆ ಸ್ಪಧಿಸಿದ್ದು, ಎಷ್ಟು ಸೀಟುಗಳನ್ನು ಗೆಲ್ಲಲಿದೆ ಎಂಬ ಕುತೂಹಲಕ್ಕೆ ಶೀಘ್ರವೇ ಸ್ಪಷ್ಟ ಉತ್ತರ ಸಿಗಲಿದೆ. ಬೆಳಗ್ಗೆ 11ರ ವೇಳೆ ವರೆಗಿನ ಬೆಳವಣಿಗೆಯಲ್ಲಿ ಎಎಪಿ 8 ಸ್ಥಾನದಲ್ಲಿ ಮುನ್ನಡೆ ಸಾಧಿಸಿದೆ.
ಗುಜರಾತ್ನಲ್ಲಿ ಸಾಂಪ್ರದಾಯಿಕವಾಗಿ ಬಿಜೆಪಿ ಮತ್ತು ಕಾಂಗ್ರೆಸ್ ನಡುವೆ ಸ್ಪರ್ಧೆ ನಡೆಯುತ್ತಿತ್ತು. ಆದರೆ, ಈ ಬಾರಿ ಕಾಂಗ್ರೆಸ್ಗೆ ಮತ್ತಷ್ಟು ಹಿನ್ನಡೆ ಉಂಟಾಗಿದೆ.