ಕರೊನಾ ಸೋಂಕಿನ ವಿರುದ್ಧ 101 ದಿನ ಹೋರಾಡಿ, ಗೆದ್ದ ಕಾಂಗ್ರೆಸ್ ಮುಖಂಡ; ಆರೋಗ್ಯ ವಿಚಾರಿಸಿದ ಪ್ರಧಾನಿ ಮೋದಿ

Congress Leader
Published on

ನವದೆಹಲಿ: ದೇಶದಲ್ಲಿ ಹಲವು ರಾಜಕಾರಣಿಗಳು ಕರೊನಾ ಸೋಂಕಿಗೆ ಒಳಗಾಗಿದ್ದಾರೆ. ಹಾಗೇ ಒಂದು ವಾರ..ಹತ್ತು ದಿನಗಳ ನಂತರ ಚೇತರಿಸಿಕೊಂಡು ಆಸ್ಪತ್ರೆಯಿಂದ ಡಿಸ್​​ಚಾರ್ಜ್​ ಕೂಡ ಆಗಿದ್ದಾರೆ. ಆದರೆ ಈ ಕಾಂಗ್ರೆಸ್​ ನಾಯಕ ಕೊವಿಡ್​-19 ಸೋಂಕಿಗೆ ಒಳಗಾಗಿ ಮೂರು ತಿಂಗಳು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು, ಇದೀಗ ಡಿಸ್​​ಚಾರ್ಜ್​ ಆಗಿದ್ದಾರೆ.

ಗುಜರಾತ್​ನ ಕಾಂಗ್ರೆಸ್​ ಮುಖಂಡ, ಮಾಜಿ ಸಚಿವ ಭರತ್​ ಸೋಲಂಕಿ (66) ಸತತ ಮೂರು ತಿಂಗಳು ಕರೊನಾ ವಿರುದ್ಧ ಹೋರಾಡಿ, ಕೊನೆಗೂ ಗೆದ್ದಿದ್ದಾರೆ.

ತಮ್ಮ ಆರೋಗ್ಯದ ಬಗ್ಗೆ ಟ್ವೀಟ್ ಮಾಡಿರುವ ಅವರು, ನಾನು 101 ದಿನಗಳ ಬಳಿಕ ಕೊವಿಡ್​-19ನಿಂದ ಚೇತರಿಸಿಕೊಂಡಿದ್ದೇನೆ. ನಿಮ್ಮೆಲ್ಲರ ಪ್ರೀತಿ, ಹಾರೈಕೆಯ ಶಕ್ತಿಯಿಂದ ನಾನು ಸಂಪೂರ್ಣ ಗುಣಮುಖನಾಗಿದ್ದೇನೆ. ವೈದ್ಯಕೀಯ ತಂಡ ಮತ್ತು ನಾನು ಬೇಗನೇ ಗುಣಮುಖರಾಗಲಿ ಎಂದು ಹಾರೈಸಿದ ಎಲ್ಲರಿಗೂ ಧನ್ಯವಾದಗಳು ಎಂದು ಸೋಲಂಕಿ ಹೇಳಿದ್ದಾರೆ. ಇದನ್ನೂ ಓದಿ: ಈ ಸರ್ಕಾರ ಯಾವಾಗ ಹೋಗುತ್ತೋ ಗೊತ್ತಿಲ್ಲ: ಸಚಿವ ಆನಂದ್ ಸಿಂಗ್ ಅಚ್ಚರಿಯ ಹೇಳಿಕೆ

ಹಾಗೇ 101 ದಿನಗಳ ಬಳಿಕ ಆಸ್ಪತ್ರೆಯಿಂದ ಡಿಸ್​ಚಾರ್ಜ್​ ಆದ ಸೋಲಂಕಿಯವರ ಜತೆ ಪ್ರಧಾನಿ ನರೇಂದ್ರ ಮೋದಿಯವರೂ ಮಾತನಾಡಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಪ್ರಧಾನಿ, ಭರತ್​ ಸೋಲಂಕಿ ಅವರೊಂದಿಗೆ ಮಾತನಾಡಿದ್ದೇನೆ. ಆರೋಗ್ಯದ ಬಗ್ಗೆಯೂ ವಿಚಾರಿಸಿದ್ದೇನೆ. ಕೊವಿಡ್​-19 ವಿರುದ್ಧ 100 ದಿನಗಳ ಕಾಲ ಧೈರ್ಯದಿಂದ ಹೋರಾಡಿದ್ದಾರೆ. ಅವರು ಇನ್ನು ಮುಂದೆ ಸದಾ ಆರೋಗ್ಯದಿಂದ ಇರಲಿ ಎಂದು ಹಾರೈಸಿದ್ದಾರೆ.

ಹಾಗೇ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರೂ ಕೂಡ ಸೋಲಂಕಿ ಆರೋಗ್ಯದ ಬಗ್ಗೆ ವಿಚಾರಿಸಿದ್ದಾರೆ. (ಏಜೆನ್ಸೀಸ್)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net