

ಅಹಮದಬಾದ್: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಕೊಂಚ ರಿಲೀಪ್ ದೊರೆತಿದೆ.
2 ವರ್ಷಗಳ ಜೈಲು ಶಿಕ್ಷೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆಯನ್ನು ನಡೆಸುವುದಾಗಿ ಗುಜರಾತ್ ಹೈಕೋರ್ಟ್ ತಿಳಿಸಿದೆ.
ಅರ್ಜಿ ವಿಚಾರಣೆ ನಡೆಸಿದ ಹೇಮಂತ್ ಪ್ರಚಕ್ ಅವರಿದ್ದ ಏಕಸದಸ್ಯ ಪೀಠವು ರಾಹುಲ್ ಪರ ವಕೀಲರು ಶಿಕ್ಷೆಗೆ ತಡೆಯಾಜ್ಞೆ ನೀಡಲು ಆರು ಮೂಲಭೂತ ಆಧಾರಗಳನ್ನು ಮಂಡಿಸಿ ಶಿಕ್ಷೆಗೆ ತಡೆ ನೀಡುವಂತೆ ನ್ಯಾಯಪೀಠಕ್ಕೆ ಒತ್ತಾಯಿಸಿದ್ದಾರೆ.
ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ವಿಚಾರಣೆಯನ್ನು ಮೇ2ಕ್ಕೆ ಮುಂದೂಡಿದ್ದರು.
ಈ ವೇಳೆ ಮಾತನಾಡಿದ ನ್ಯಾಯಾಧೀಶರು ಒಬ್ಬ ಚುನಾಯಿತ ಜನಪ್ರತಿನಿಧಿಯಾಗಿ ಹೇಳಿಕೆಗಳನ್ನು ನೀಡುವ ಸಮಯದಲ್ಲಿ ಹೆಚ್ಚು ಜಾಗರೂಕರಾಗಿರಬೇಕು. ಜನರನ್ನು ಪ್ರತಿನಿಧಿಸುವವರು ತಮ್ಮ ಹೇಳಿಕೆಯನ್ನು ಎಚ್ಚರಿಕೆಯಿಂದ ನೀಡಬೇಕು ಎಂದು ಅಭಿಪ್ರಾಯಪಟ್ಟಿದ್ದಾರೆ.
ಈ ಹಿಂದೆ ರಾಹುಲ್ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆಯಿಂದ ನ್ಯಾಯಾಧೀಶರು ಹಿಂದೆ ಸರಿದಿದ್ದು ದೊಡ್ಡ ಮಟ್ಟದಲ್ಲಿ ಸುದ್ದಿಯಾಗಿತ್ತು.