

ಅಹಮದಬಾದ್: 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮ ಕುರಿತು ವ್ಯಂಗ್ಯವಾಡಿ ಮಾನನಷ್ಟ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಂಸತ್ ಸ್ಥಾನದಿಂದ ಅನರ್ಹಗೊಂಡಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಮತ್ತೊಂದು ಸಂಕಷ್ಟು ಎದುರಾಗಿದೆ.
ತನಗೆ ವಿಧಿಸಿರುವ ಶಿಕ್ಷೆಯನ್ನು ತಡೆಯುವಂತೆ ಕೋರಿ ರಾಹುಲ್ ಗಾಂಧಿ ಗುಜರಾತ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಆದರೆ, ಅರ್ಜಿ ವಿಚಾರಣೆಯಿಂದ ನ್ಯಾಯಾಧೀಶರು ಹಿಂದೆ ಸರಿದಿರುವುದು ರಾಹುಲ್ಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿದೆ.
ಇನ್ನು ರಾಹುಲ್ ಗಾಂಧಿ ತಮಗೆ ನೀಡಿರುವ ಶಿಕ್ಷೆ ಪ್ರಮಾಣವನ್ನು ತಡೆಯುವಂತೆ ಕೋರಿ ಗುಜರಾತ್ ಹೈಕೋರ್ಟ್ಗೆ ಅರ್ಜಿ ಸಲ್ಲಿಸಿದ್ದರು. ಹೈಕೋರ್ಟ್ನ ನ್ಯಾಯಾಧೀಶೆ ಗೀತಾ ಗೋಪಿ ಪ್ರಕರಣದ ವಿಚಾರಣೆಯಿಂದ ಹಿಂದೆ ಸರಿದಿದ್ದಾರೆ.
ರಾಹುಲ್ ಗಾಂಧಿ ಶಿಕ್ಷೆಯ ಪ್ರಮಾಣ ಕುರಿತು ಸಲ್ಲಿಸಲಾಗಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶೆ ಗೀತಾ ಗೋಪಿ ವಾದ-ಪ್ರತಿವಾದವನ್ನು ಆಲಿಸಿದ ನಂತರ ಪ್ರಕರಣವನ್ನು ಬೇರೆ ಪೀಠಕ್ಕೆ ವರ್ಗಾಯಿಸುವಂತೆ ಸೂಚಿಸಿ ಹಿಂದೆ ಸರಿದರು.