ಅಕ್ರಮವಾಗಿ ಮದ್ಯ ಸಾಗಾಟ ಮಾಡುತ್ತಿದ್ದ ಕಾಂಗ್ರೆಸ್​​ ನಾಯಕಿ ಅರೆಸ್ಟ್​​!

Gujarat Police arrests Congress leader Meghna Patel in alcohol seizure case
Published on

ಗಾಂಧಿನಗರ: ಅಪರಿಚಿತರ ಗುಂಪೊಂದು ಕಾರಿನಲ್ಲಿ ಮದ್ಯ ಸಾಗಣೆ ಮಾಡುತ್ತಿದ್ದ ವೇಳೆ ಪೊಲೀಸರು ದಾಳಿ ನಡೆಸಿದ್ದಾರೆ. ವಿದೇಶಿ ಮದ್ಯದ ಸರಕನ್ನು ಕಳ್ಳಸಾಗಣೆ ಮಾಡುತ್ತಿದ್ದ ಆರೋಪದ ಮೇಲೆ ಕಾಂಗ್ರೆಸ್ ನಾಯಕಿಯನ್ನು ಗುಜರಾತ್ ಪೊಲೀಸರು ಬಂಧಿಸಿದ್ದಾರೆ.

10 ಲಕ್ಷ ರೂ. ಮೌಲ್ಯದ ಮದ್ಯವನ್ನು ಗುಜರಾತ್ ಪೊಲೀಸರು ವಶಪಡಿಸಿಕೊಂಡಿದ್ದಾರೆ. ಗುಜರಾತ್‌ನ ಮಹಿಳಾ ಪ್ರದೇಶ ಕಾಂಗ್ರೆಸ್ ಸಮಿತಿಯ ಮಾಜಿ ಉಪಾಧ್ಯಕ್ಷೆ ಮೇಘನಾ ಪಟೇಲ್ ಅವರನ್ನ ಬಂಧಿಸಿದ್ದಾರೆ.

ಪೊಲೀಸರ ದಾಳಿ ವೇಳೆ ಕಾರು ಚಾಲಕನನ್ನು ಹಿಡಿದು ವಿಚಾರಿಸಿದಾಗ ಮೇಘನಾ ಪಟೇಲ್‌ಗಾಗಿ 7.5 ಲಕ್ಷ ರೂ.ಗಳ ವಿದೇಶಿ ಸರಕನ್ನು ತರಲಾಗಿದೆ ಎಂಬುದು ತಿಳಿದುಬಂದಿತ್ತು. ಬಳಿಕ ಮೇಘನಾ ಪಟೇಲ್ ಅವರನ್ನು ಬಂಧಿಸಿ ಅವರ ಮೂಲಕ ಮತ್ತಷ್ಟು ಮದ್ಯ ವಶಪಡಿಸಿಕೊಳ್ಳಲಾಯಿತು. ಒಟ್ಟು 10 ಲಕ್ಷ ಮೌಲ್ಯದ ಮದ್ಯ ವಶಪಡಿಸಿಕೊಂಡು ಆಕೆಯನ್ನು ಬಂಧಿಸಲಾಯಿತು ಎಂದು ಉಮ್ರಾ ಪೊಲೀಸ್ ಠಾಣೆ ಅಧಿಕಾರಿ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net