ಕಲಬುರಗಿಯಲ್ಲಿ 8 ಮಂದಿ ಕರೊನಾ ಶಂಕಿತರಿಗೆ ಪ್ರತ್ಯೇಕ ವಾರ್ಡ್​ಗಳಲ್ಲಿ ಚಿಕಿತ್ಸೆ

Coronavirus 16 march 20
Published on

ಕಲಬುರಗಿ: ಜಿಲ್ಲೆಯಲ್ಲಿ ಕರೊನಾ ಸೋಂಕಿತರ ಸಂಖ್ಯೆ 3 ತಲುಪಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಮೂವರು ಸೋಂಕಿತರಲ್ಲಿ ಈಗಾಗಲೇ ಒಬ್ಬರು ಮೃತಪಟ್ಟಿದ್ದಾರೆ. ಕರೊನಾ ಸೋಂಕು ಶಂಕಿತ 8 ಮಂದಿ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮನೆಯಲ್ಲಿ 763 ಮಂದಿ ಪ್ರತ್ಯೇಕವಾಗಿ ಇದ್ದು ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಜಿಲ್ಲಾಧಿಕಾರಿ ಕಚೇರಿ ಮಾಹಿತಿ ನೀಡಿದೆ.
ವಿದೇಶದಿಂದ ಕಲಬುರಗಿಗೆ ಬಂದ 299 ಮಂದಿಯನ್ನು ಪತ್ತೆ ಮಾಡಲಾಗಿದೆ. 22 ಮಂದಿ ಶಂಕಿತ ರೋಗಿಗಳ ರಕ್ತದ ಮಾದರಿ ಸಂಗ್ರಹಿಸಿ ಪುಣೆ ಪ್ರಯೋಗಾಲಯಕ್ಕೆ ಕಳುಹಿಸಲಾಗಿದೆ. ಇವರಲ್ಲಿ 3 ಮಂದಿಯಲ್ಲಿ ಮಾತ್ರ ಸೋಂಕು ಇರುವುದು ದೃಢಪಟ್ಟಿದೆ, 12 ಮಂದಿಗೆ ಸೋಂಕು ಹರಡಿಲ್ಲ ಎಂದು ತಿಳಿದು ಬಂದಿದೆ. ಇನ್ನು ನಾಲ್ವರ ವರದಿ ಬರಬೇಕಾಗಿದೆ. ಜಿಲ್ಲೆಯಲ್ಲಿ ಸೋಂಕು ಹರಡದಂತೆ ತಡೆಯಲು ಎಲ್ಲ ರೀತಿಯ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net