ಭದ್ರತಾ ಪಡೆಗಳು, ಭಯೋತ್ಪಾದಕರ ನಡುವೆ ಗುಂಡಿನ ಚಕಮಕಿ: 10 ಉಗ್ರರು ಬಲಿ | Imphal

Imphal
Published on

Imphal: ಮಣಿಪುರದ ಚಾಂಡೆಲ್ ಜಿಲ್ಲೆಯಲ್ಲಿ ಬುಧವಾರ (ಮೇ.14) ಅಸ್ಸಾಂ ರೈಫಲ್ಸ್ ಘಟಕದ ಜೊತೆ ನಡೆದ ಗುಂಡಿನ ಚಕಮಕಿಯಲ್ಲಿ ಕನಿಷ್ಠ 10 ಉಗ್ರರು ಸಾವನ್ನಪ್ಪಿದ್ದಾರೆ ಎಂದು ಭದ್ರತಾ ಪಡೆಗಳು ತಿಳಿಸಿದ್ದಾರೆ. ಘಟನೆಯಾದ ಈ ಸ್ಥಳದಲ್ಲಿ ಕಾರ್ಯಾಚರಣೆ ಮುಂದುವರೆದಿದ್ದು, ಅಪಾರ ಪ್ರಮಾಣದಲ್ಲಿ ಶಸ್ತ್ರಾಸ್ತ್ರಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಭಾರತ-ಮ್ಯಾನ್ಮಾರ್ ಗಡಿಗೆ ಸಮೀಪವಿರುವ ನ್ಯೂ ಸಮ್ತಾಲ್ ಗ್ರಾಮದ ಬಳಿ ಸಶಸ್ತ್ರ ಉಗ್ರರರ ಚಲನವಲನಗಳ ಬಗ್ಗೆ ಗುಪ್ತಚರ ಮಾಹಿತಿಯ ಮೇರೆಗೆ ಮೇ 14ರಂದು ಕಾರ್ಯಾಚರಣೆಯನ್ನು ಪ್ರಾರಂಭಿಸಿತು ಎಂದು ಸೇನೆಯ ಪೂರ್ವ ಕಮಾಂಡ್​​​ ಎಕ್ಸ್​​​ನಲ್ಲಿ ಪೋಸ್ಟ್ ಮಾಡಿದೆ.

ಈ ಕಾರ್ಯಾಚರಣೆಯ ಸಮಯದಲ್ಲಿ ಶಂಕಿತ ಉಗ್ರರು ಭದ್ರತಾ ಪಡೆಗಳ ಮೇಲೆ ಗುಂಡು ಹಾರಿಸಿದರು ಅದಕ್ಕೆ ಪ್ರತಿಯಾಗಿ ಸೇನೆಯೂ ಗುಂಡು ಹಾರಿಸಿದೆ, ನಂತರ ಈ ಗುಂಡಿನ ಚಕಮಕಿಯಲ್ಲಿ 10 ಉಗ್ರರನ್ನು ಹತ್ಯೆ ಮಾಡಲಾಗಿದೆ ಎಂದು ಮಾಹಿತಿ ನೀಡಿದೆ. (ಏಜೆನ್ಸೀಸ್​)

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net