ಪುಲ್ವಾಮಾದಲ್ಲಿ ಗುಂಡಿನ ಚಕಮಕಿ; ಮೂವರು ಭಯೋತ್ಪಾದಕರು ಬಲಿ| Terrorists encounter

terror
Published on

Pulwama | ಜಮ್ಮು ಮತ್ತು ಕಾಶ್ಮೀರದಲ್ಲಿ ಭಯೋತ್ಪಾದಕರನ್ನು ಹುಡುಕಿ ಹುಡುಕಿ ಕೊಲ್ಲಲಾಗುತ್ತಿದ್ದು, ಇಂದು (15) ಬೆಳಗ್ಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾ ಜಿಲ್ಲೆಯಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಜೈಶ್-ಎ-ಮೊಹಮ್ಮದ್ ಭಯೋತ್ಪಾದಕರು ಸಾವನ್ನಪ್ಪಿದ್ದಾರೆ. ಭದ್ರತಾ ಪಡೆಗಳು ಪುಲ್ವಾಮಾದ ಟ್ರಾಲ್‌ನಲ್ಲಿ ಮೂವರು ಭಯೋತ್ಪಾದಕರನ್ನು ಕೊಂದಿದ್ದಾರೆ. ಟ್ರಾಲ್‌ನ ನಾಡರ್ ಪ್ರದೇಶದಲ್ಲಿ ಕೊಲ್ಲಲ್ಪಟ್ಟ ಈ ಮೂವರು ಭಯೋತ್ಪಾದಕರು ಜೈಶ್-ಎ-ಮೊಹಮ್ಮದ್ ಜೊತೆ ಸಂಬಂಧ ಹೊಂದಿದ್ದರು ಎಂದು ತಿಳಿದು ಬಂದಿದೆ.

ಉಗ್ರರು ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಜೈಶ್-ಎ-ಮೊಹಮ್ಮದ್ ಜೊತೆ ಈ ಸಂಪರ್ಕ ಇರುವುದು ಬಹಿರಂಗವಾಗಿದೆ. ಅವರೆಲ್ಲರೂ ಅವಂತಿಪೋರಾದ ಟ್ರಾಲ್ ಪ್ರದೇಶದಲ್ಲಿ ಅಡಗಿಕೊಂಡಿದ್ದರು. ಭದ್ರತಾ ಪಡೆಗಳು ಶೋಧ ಕಾರ್ಯಾಚರಣೆ ನಡೆಸಲು ಟ್ರಾಲ್ ತಹಸಿಲ್‌ನ ನಾಡರ್ ಗ್ರಾಮವನ್ನು ಸುತ್ತುವರೆದವು. ಭದ್ರತಾ ಪಡೆಗಳು ಅಡಗಿಕೊಂಡಿದ್ದ ಭಯೋತ್ಪಾದಕರ ಬಳಿಗೆ ಬಂದ ತಕ್ಷಣ, ಪರಸ್ಪರ ಗುಂಡಿನ ದಾಳಿ ನಡೆದಿದೆ. ನಂತರ ಭದ್ರತಾ ಪಡೆಗಳು ತಕ್ಕ ಪ್ರತ್ಯುತ್ತರವನ್ನು ನೀಡಿ ಉಗ್ರರನ್ನು ಮಟ್ಟ ಹಾಕಿವೆ.

ಈ ಪ್ರದೇಶದಲ್ಲಿ ಮೂರಕ್ಕಿಂತ ಹೆಚ್ಚು ಭಯೋತ್ಪಾದಕರು ಇರಬಹುದೆಂದು ಭದ್ರತಾ ಪಡೆಗಳು ಊಹಿಸುತ್ತಿರುವುದರಿಂದ ಕಾರ್ಯಾಚರಣೆ ಇನ್ನೂ ಮುಂದುವರೆದಿದೆ.

(ಏಜೆನ್ಸೀಸ್)

ಭಾರತೀಯ ಸೇನೆಯ ಪ್ರಕಾರ, ರಾಷ್ಟ್ರೀಯ ರೈಫಲ್ಸ್ ಘಟಕದ ನಿರ್ದಿಷ್ಟ ಗುಪ್ತಚರ ಮಾಹಿತಿಯ ಆಧಾರದ ಮೇಲೆ, ಶೋಕಲ್ ಕೆಲ್ಲರ್ ಸಾಮಾನ್ಯ ಪ್ರದೇಶದಲ್ಲಿ ಭಯೋತ್ಪಾದಕರು ಇರುವ ಬಗ್ಗೆ, ಭಾರತೀಯ ಸೇನೆಯು ಆಪರೇಷನ್ ಕೆಲ್ಲರ್ ಅನ್ನು ಪ್ರಾರಂಭಿಸಿತ್ತು. ಭಯೋತ್ಪಾದಕರು ಪಡೆಗಳ ಮೇಲೆ ಗುಂಡು ಹಾರಿಸಿದ ನಂತರ ಶೋಧ ಕಾರ್ಯಾಚರಣೆಯು ಎನ್‌ಕೌಂಟರ್ ಆಗಿ ಬದಲಾಯಿತು ಮತ್ತು ಅವರು ಪ್ರತಿದಾಳಿ ನಡೆಸಿದರು.

ಮಂಗಳವಾರ ಮುಂಜಾನೆ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯ ಶುಕ್ರೂ ಕೆಲ್ಲರ್ ಅರಣ್ಯ ಪ್ರದೇಶದಲ್ಲಿ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಲಷ್ಕರ್-ಎ-ತೊಯ್ಬಾದ ಮೂವರು ಭಯೋತ್ಪಾದಕರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net