26ರಂದು ಗುರುವಂದನಾ ಕಾರ್ಯಕ್ರಮ

Published on

ಎಚ್.ಡಿ.ಕೋಟೆ: ಗುರುವಂದನಾ ಕಾರ್ಯಕ್ರಮವನ್ನು ನ.26ರಂದು ಪಟ್ಟಣದ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಐಡಿಯಾ ವೆಂಕಟೇಶ್ ತಿಳಿಸಿದರು.

ಸರ್ಕಾರಿ ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿನಲ್ಲಿ 1994 ರಿಂದ 2000ನೇ ಸಾಲಿನ ಒಳಗೆ ವ್ಯಾಸಂಗ ಮಾಡಿದಂತ ವಿದ್ಯಾರ್ಥಿಗಳು ಸೇರಿ ಗುರುವಂದನಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಕಾಲೇಜಿನಲ್ಲಿ ವ್ಯಾಸಂಗ ಮಾಡಿದ ಎಲ್ಲ ಹಳೆಯ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.

ಕಾಲೇಜಿನ ಹಳೇ ವಿದ್ಯಾರ್ಥಿ ಹನುಮಯ್ಯ ಮಾತನಾಡಿ, ಶಿಕ್ಷಕರು ನೀಡಿದ ವಿದ್ಯಾಭ್ಯಾಸ ಹಾಗೂ ಅವರ ಮಾರ್ಗದರ್ಶನದಲ್ಲಿ ನಾವು ಸಮಾಜದಲ್ಲಿ ಉನ್ನತ ಸ್ಥಾನದಲ್ಲಿದ್ದೇವೆ. ಇದಕ್ಕೆ ಮುಖ್ಯ ಕಾರಣವಾಗಿರುವ ಗುರುಗಳನ್ನು ಎಲ್ಲ ವಿದ್ಯಾರ್ಥಿಗಳು ಸೇರಿ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net