ಬೆಂಗಳೂರು:
ಗ್ಯಾರಂಟಿ ಯೋಜನೆಗಳಿಗೆ 52 ಸಾವಿರ ಕೋಟಿ ಮೀಸಲಿಟ್ಟಿದ್ದು, ಈ ತನಕ 11,752 ಕೊಟಿ ರೂ ವೆಚ್ಚ ಮಾಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದ್ದಾರೆ.
ಜೆಡಿಎಸ್‌ನ ತಿಪ್ಪೇಸ್ವಾಮಿ ಅವರ ಪ್ರಶ್ನೆಗೆ ಉತ್ತರಿಸಿ, ಕಳೆದ ವರ್ಷ 37257 ಕೋಟಿ ಮೀಸಲಿರಿಸಿದ್ದು, 34,859 ಕೋಟಿ ರೂ ವೆಚ್ಚವಾಗಿದೆ ಎಂದಿದ್ದಾರೆ.
ಗ್ಯಾರಂಟಿ ಯೋಜನೆಗಾಗಿ ಆಸ್ತಿಗಳ ನಗದೀಕರಣ ಮಾಡುವ ಯಾವುದೇ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಸಭಾನಾಯಕ ಬೋಸರಾಜು ಉತ್ತರಿಸಿದರು.