ಮಹಿಳೆ ಕೊಲೆ ಮಾಡಿ ಮ್ಯಾಜಿಸ್ಟ್ರೇಟ್​ ಮನೆ ಬಳಿ ಹೂತಿಟ್ಟ Gym Trainer; ಆರೋಪಿ ಸಿಕ್ಕಿಬಿದ್ದಿದ್ದೇ ರಣರೋಚಕ

Gym Trainer
Published on

ಲಖನೌ: ನಾಲ್ಕು ತಿಂಗಳ ಹಿಂದೆ ಕಾಣೆಯಾಗಿದ್ದ ಮಹಿಳೆಯೊಬ್ಬರು ಜಿಲ್ಲಾ ಮ್ಯಾಜಿಸ್ಟ್ರೇಟ್​ ಮನೆ ಬಳಿ ಶವವಾಗಿ ಪತ್ತೆಯಾಗಿರುವ ಘಟನೆ ಉತ್ತರಪ್ರದೇಶದ ಕಾನ್ಪುರದಲ್ಲಿ ನಡೆದಿದೆ. ಮ್ಯಾಜಿಸ್ಟ್ರೇಟ್​ ಮನೆ ಬಳಿ ನೆಲ ಅಗೆಯುತ್ತಿದ್ದ ವೇಳೆ ಘಟನೆ ಬೆಳಕಿಗೆ ಬಂದಿದ್ದು, ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ವಿಮಲ್​ ಸೋನಿ ಎಂದು ಗುರುತಿಸಲಾಗಿದ್ದು, ಈತ ಜಿಮ್​ ಟ್ರೈನರ್​ (Gym Trainer) ಆಗಿ ಕೆಲಸ ಮಾಡುತ್ತಿದ್ದಾನೆ. ಪೊಲೀಸ್​ ವಿಚಾರಣೆ ವೇಳೆ ಆರೋಪಿ ತಪ್ಪೊಪ್ಪಿಕೊಂಡಿದ್ದು, ಶೀಘ್ರದಲ್ಲೇ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

ಈ ಕುರಿತು ಮಾತನಾಡಿರುವ ಡಿಸಿಪಿ ಶ್ರವಣ್​ಕುಮಾರ್​ ಸಿಂಗ್​, ನಾಲ್ಕು ತಿಂಗಳ ಹಿಂದೆ ದೆಹಲಿಯಲ್ಲಿ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬಂಧಿತ ಆರೋಪಿ (Gym Trainer) ಕೆಲಸ ಮಾಡುತ್ತಿದ್ದ ಜಿಮ್​ಗೆ ಮಹಿಳೆ ಹೋಗುತ್ತಿದ್ದಳು. ಇಬ್ಬರ ನಡುವೆ ಆತ್ಮೀಯತೆ ಬೆಳೆದುಕೊಂಡಿತ್ತು. ಅರೋಪಿಗೆ ಮದುವೆ ನಿಶ್ಚಯವಾಗಿದ್ದರಿಂದ ಅಸಮಾಧಾನಗೊಂಡಿದ್ದ ಮಹಿಳೆ ಆತನ (Gym Trainer) ಮನವೊಲಿಸಲು ಸಾಕಷ್ಟು ಪ್ರಯತ್ನಿಸಿದಳು. ಆದರೆ, ಆರೋಪಿ ಆಕೆಯ ಮಾತಿಗೆ ಬೆಲೆ ಕೊಟ್ಟಿರಲಿಲ್ಲ.

ಕೊಲೆಯಾಗುವ ದಿನವೂ ಮಹಿಳೆ ಹಾಗೂ ಆರೋಪಿ ನಡುವೆ ಇದೇ ವಿಚಾರಕ್ಕೆ ಜಗಳವಾಗಿದ್ದು, ಪರಿಸ್ಥಿತಿ ವಿಕೋಪಕ್ಕೆ ತಿರುಗಿ ಆರೋಪಿ ಮಹಿಳೆಯ ಕೊಲೆ ಮಾಡಿದ್ದಾನೆ. ಬಳಿಕ ಕಾನ್ಪುರದಲ್ಲಿರುವ ಸರ್ಕಾರಿ ಬಂಗಲೆ ಬಳಿ ಆಕೆಯ ಶವವನ್ನು ಹೂತು ಪರಾರೊಇಯಾಗಿದ್ದ. ಆರೋಪಿ (Gym Trainer) ಮೊಬೈಲ್​ ಬಳಸದ ಕಾರಣ ಆತನನ್ನು ಪತ್ತೆ ಹಚ್ಚಲು ಸ್ವಲ್ಪ ಕಷ್ಟವಾಯಿತು. ಆರೋಪಿಯನ್ನು ಬಂಧಿಸಿ ವಿಚಾರಣೆಗೆ ಒಳಪಡಿಸಿದಾಗ ಕುತ್ತಿಗೆ ಭಾಗಕ್ಕೆ ಹೊಡೆದು ಕೊಲೆ ಮಾಡಿರುವುದಾಗಿ ತಪ್ಪೊಪ್ಪಿಕೊಂಡಿದ್ದಾನೆ. ಶೀಘ್ರದಲ್ಲೇ ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಡಿಸಿಪಿ ಶ್ರವಣ್​ಕುಮಾರ್​ ಸಿಂಗ್​ ತಿಳಿಸಿದ್ದಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net